ಕೊಪ್ಪಳ ಬಂದ್ | ತೆರೆಯದ ಅಂಗಡಿ- ಮುಂಗ್ಗಟ್ಟು: ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಕೊಪ್ಪಳ, ಅ.31: ತಾಲೂಕು ವ್ಯಾಪ್ತಿಯಲ್ಲಿ ಕಾರ್ಖಾನೆಗಳು ಪರಿಸರ ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಕೊಪ್ಪಳ ಬಚಾವೋ ಆಂದೋಲನ ಸಮಿತಿಯ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಒಂದು ವರ್ಷ ಪೂರ್ಣಗೊಳಿಸಿದೆ. ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಆಂದೋಲನ ಸಮಿತಿ ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ( ಶನಿವಾರ) ಸ್ವಯಂ ಪ್ರೇರಿತ 'ಕೊಪ್ಪಳ ಬಂದ್' ಘೋಷಿಸಲಾಗಿದೆ.
ಕೊಪ್ಪಳದ ವ್ಯಾಪಾರಸ್ಥರು ತಮ್ಮ ಅಂಗಡಿ ಮುಗ್ಗಟ್ಟು ಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ನಗರದ ಎಲ್ಲಾ ಖಾಸಗಿ ಶಾಲೆಗಳು ರಜೆ ಘೋಷಿಸಿ ಬಂದ್ ಗೆ ಬೆಂಬಲ ಸೂಚಿಸಿವೆ ಎಂದು ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ 'ವಾರ್ತಾಭಾರತಿ'ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಮಧ್ಯೆ ಬೆಳಗ್ಗೆಯಿಂದ ಸ್ಥಗಿತಗೊಂಡಿದ್ದ ಬಸ್ ಮತ್ತು ಆಟೋ ಸಂಚಾರ ನಗರದಲ್ಲಿ ಪುನಾರಂಭಗೊಂಡಿದೆ.
Next Story




