Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಬಸವಣ್ಣ, ಬುದ್ಧ, ಅಂಬೇಡ್ಕರ್...

Koppal | ಬಸವಣ್ಣ, ಬುದ್ಧ, ಅಂಬೇಡ್ಕರ್ ಕುರಿತು ಅವಹೇಳನ ಆರೋಪ; ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 Sept 2026 8:31 PM IST
share
Koppal | ಬಸವಣ್ಣ, ಬುದ್ಧ, ಅಂಬೇಡ್ಕರ್ ಕುರಿತು ಅವಹೇಳನ ಆರೋಪ; ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಕೊಪ್ಪಳ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಜಗಜ್ಯೋತಿ ಬಸವಣ್ಣ, ಗೌತಮ ಬುದ್ಧ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಜನಪರ, ಪ್ರಗತಿಪರ, ದಲಿತಪರ ಹಾಗೂ ಕಾನೂನು ವಿದ್ಯಾರ್ಥಿಗಳ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಕೊಪ್ಪಳದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಉಪ ತಹಶೀಲ್ದಾರ್ ಜಿ. ಸತೀಶ್ ಅವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರ ಆರೋಪದಂತೆ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ದೊಡ್ಡಯಚೇನಹಳ್ಳಿ ಗ್ರಾಮದ ‘ವೇದಮೂರ್ತಿ’ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಬಸವಣ್ಣ, ಬುದ್ಧ, ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದರೂ, ಯಾವುದೇ ಸಮುದಾಯದ ವಿರುದ್ಧ ದ್ವೇಷ ಹರಡುವ ಅಥವಾ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಆರೋಪಿಯ ವಿರುದ್ಧ ಸೂಕ್ತ ಕಾನೂನುಗಳಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಆರೋಪಿಯ ವಿರುದ್ಧ ರೌಡಿಶೀಟರ್ ತೆರೆಯಬೇಕು ಹಾಗೂ ಅಗತ್ಯವಿದ್ದರೆ ರಾಜ್ಯದಿಂದ ಗಡಿಪಾರು ಮಾಡಬೇಕು. ಭಾರತೀಯ ನ್ಯಾಯ ಸಂಹಿತೆ (BNS), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರಗತಿಪರ ಚಿಂತಕ ಧರ್ಮರಾಜ ಗೋನಾಳ ಮಾತನಾಡಿ, ಬಸವಣ್ಣ, ಬುದ್ಧ ಹಾಗೂ ಅಂಬೇಡ್ಕರ್ ಅವರಂತಹ ಮಹನೀಯರನ್ನು ಅವಹೇಳನ ಮಾಡುವುದು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯವಾಗಿದ್ದು, ಸರ್ಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಜನಪರ ಚಿಂತಕಿ ಸಲ್ಮಾ ಜಾನ್ ಮಾತನಾಡಿ, ಮಹನೀಯರು ಮತ್ತು ದಲಿತ ಸಮುದಾಯದ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುವ ಪ್ರಯತ್ನವನ್ನು ಖಂಡಿಸಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಇಂತಹ ಕೃತ್ಯಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್. ಎ. ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ಕಾದ್ರೋಳಿ ಬಣ) ಜಿಲ್ಲಾಧ್ಯಕ್ಷ ನಿಂಗಪ್ಪ ಜಿ. ಎಸ್. ಬೆಣಕಲ್, ಕಾನೂನು ವಿದ್ಯಾರ್ಥಿಗಳ ಸಂಘಟನೆಯ ಸಂಚಾಲಕ ಹನುಮೇಶ ಛಲವಾದಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ ಮುದುಕಪ್ಪ ಹೊಸಮನಿ, ದಲಿತ ಯುವ ವೇದಿಕೆ ಸಂಚಾಲಕ ಸುಂಕಪ್ಪ ಮೀಸಿ, ಯಲ್ಲಪ್ಪ ಮ್ಯಾಗಳಕೇರಿ, ಭೀಮಾಶಂಕರ ಪಾಣೇಗಾಂವ, ಚಂದ್ರು ಆರ್. ಭಾನಾಪುರ, ಮಾರುತಿ ಚಂಡೂರ್, ದಿಲ್ ಶಾದ ನದಾಫ್, ಕರಿಯಪ್ಪ ಮಣ್ಣಿನವರ, ಶಶಿಕಲಾ ಮಠದ, ಸೇರಿದಂತೆ ಹಲವು ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Tags

AmbedkarBuddhaBasavannaKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X