Koppal | ರಸ್ತೆಗೆ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ: ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಕೊಪ್ಪಳ : ತಾಲೂಕಿನ ಕಾಮನೂರು ಸಮೀಪ ರಸ್ತೆ ಮೇಲೆ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.
ಅಪಘಾತದಲ್ಲಿ ಕಾಮನೂರಿನ ಕಿರಣ ಕುರುಬಡಗಿ ಮೃತಪಟ್ಟ ದುರ್ದೈವಿಯಾಗಿದ್ದು, ಮಹೇಶ್ ಹುಳ್ಳಿ ತಲೆಗೆ ಗಂಭೀರ ಗಾಯಗೊಂಡು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ಮರಿಯಮ್ಮನಹಳ್ಳಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನದಂತೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೆಳಗಿನ ಸುಮಾರು 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಳೆಯಿಂದ ರಸ್ತೆ ಮೇಲೆ ಮರ ಬಿದ್ದಿದ್ದ ಕಾರಣ ಬೈಕ್ ಸವಾರರಿಗೆ ಅದು ಕಾಣಿಸದೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Next Story




