Koppal | ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ; ಓರ್ವ ಸ್ಥಳದಲ್ಲೇ ಮೃತ್ಯು

ಸಾಂದರ್ಭಿಕ ಚಿತ್ರ
ಕೊಪ್ಪಳ: ನಗರದ ಹೊಸಪೇಟೆ ರಸ್ತೆಯ ಕಿಶೋರಿ ಪೆಟ್ರೋಲ್ ಬಂಕ್ ಸಮೀಪ ಮಂಗಳವಾರ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಚಿಲವಾಡಗಿ ಗ್ರಾಮದ ಹನುಮಂತ ಜೀನ್ (48) ಎಂದು ಗುರುತಿಸಲಾಗಿದೆ.
ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಒಜನಹಳ್ಳಿ ಗ್ರಾಮದ ನಿವಾಸಿ ಹಾಗೂ ಕೆಇಬಿ ಬಿಲ್ ಕಲೆಕ್ಟರ್ ಮಂಜಣ್ಣ (50) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ಬಳಿಕ ಸ್ಥಳೀಯರು ಇಬ್ಬರನ್ನೂ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.
Next Story




