Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ದಲಿತರ ಮೇಲೆ ಗುಂಪು ಹಲ್ಲೆ...

Koppal | ದಲಿತರ ಮೇಲೆ ಗುಂಪು ಹಲ್ಲೆ ಆರೋಪ : 39 ಜನರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ1 July 2026 7:35 PM IST
share
Koppal | ದಲಿತರ ಮೇಲೆ ಗುಂಪು ಹಲ್ಲೆ ಆರೋಪ : 39 ಜನರ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ : ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ಮೊಹರಂ ಹಬ್ಬದ ಸಂದರ್ಭದಲ್ಲಿ ನಡೆದ ಸಣ್ಣ ಗಲಾಟೆಯ ಬಳಿಕ ದಲಿತ ಕುಟುಂಬಗಳ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ 39 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೂ.26ರಂದು ಮೊಹರಂ ಹಬ್ಬದ ಅಂಗವಾಗಿ ಅಲಾವಿ ಕುಣಿಯುವ ವೇಳೆ ಯಮನಪ್ಪ ಹರಿಜನ್ ಅವರ ಕಾಲನ್ನು ಶೇಖರಪ್ಪ ಉಪ್ಪಾರ್ ತುಳಿದ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಯಮನಪ್ಪ ಅವರು ಶೇಖರಪ್ಪ ಅವರನ್ನು ತಳ್ಳಿದ್ದು, ಕೆಳಗೆ ಬಿದ್ದ ಶೇಖರಪ್ಪ ಅವರು ಚಪ್ಪಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಗಲಾಟೆ ಬಿಡಿಸಲು ಮುಂದಾದ ಯುವಕನ ಮೇಲೂ ಗಣಿಸಾಬ್ ನದಾಫ್ ಹಾಗೂ ಶೇಖರಪ್ಪ ಉಪ್ಪಾರ್ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ..

ಘಟನೆಯ ಬಳಿಕ ಗ್ರಾಮದ ಹಿರಿಯರು ಮಧ್ಯಸ್ಥಿಕೆ ವಹಿಸಿ ರಾಜಿ ಮಾಡಿಸಿದ್ದರು. ಆದರೆ, ಮರುದಿನ ದಲಿತ ಸಮುದಾಯದ ವ್ಯಕ್ತಿಯೊಬ್ಬರು “ಈ ಬಾರಿ ರಾಜಿ ಬೇಡ, ಕಾನೂನು ಕ್ರಮ ಆಗಬೇಕು” ಎಂದು ಹೇಳಿದ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಂತರ ಕೆಲವರು ಗುಂಪಾಗಿ ದಲಿತ ಕುಟುಂಬಗಳ ಮನೆಗಳ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳೆಯರು ಹಾಗೂ ಯುವಕರು ಸೇರಿದಂತೆ ಮನೆಯವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಾಯಗೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಒದಗಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳು ಆಗ್ರಹಿಸಿವೆ.

ಈ ಸಂಬಂಧ ಬೋಚನಹಳ್ಳಿ ಗ್ರಾಮದ ಮಂಜುಳಾ ಮೈಲಪ್ಪ ಹಿರೇಮನಿ ಅವರು 39 ಜನರ ವಿರುದ್ಧ ದೂರು ದಾಖಲಿಸಿದ್ದು, ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಅಳವಂಡಿ ಪೊಲೀಸರು ಮುಂದುವರಿಸಿದ್ದಾರೆ.

ಈ ಕುರಿತು 39 ಜನರ ವಿರುದ್ಧ ಪ್ರತಿ ದೂರು ಕೂಡ ದಾಖಲಾಗಿದೆ.

Tags

DalitsKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X