Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಸಿಮೆಂಟ್ ಲಾರಿ–ಬೈಕ್ ಮುಖಾಮುಖಿ...

Koppal | ಸಿಮೆಂಟ್ ಲಾರಿ–ಬೈಕ್ ಮುಖಾಮುಖಿ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ20 May 2026 7:20 PM IST
share
Koppal | ಸಿಮೆಂಟ್ ಲಾರಿ–ಬೈಕ್ ಮುಖಾಮುಖಿ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

ಕುಕನೂರು: ತಾಲ್ಲೂಕಿನ ರಾಜೂರು ಗ್ರಾಮದ ಸಮೀಪದ ಬೈಪಾಸ್ ರಸ್ತೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿಮೆಂಟ್ ಸಾಗಣೆ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಯಲಬುರ್ಗಾ ತಾಲೂಕಿನ ಬಳೂಟಿಗಿ ಗ್ರಾಮದ ಬಸಣ್ಣ ಗೂಗೇರಿ (55) ಹಾಗೂ ಶಂಕ್ರಪ್ಪ ಸುತ್ತರೊಟ್ಟಿ (48) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸಂಜೆ ಸುಮಾರು 4.30ರ ವೇಳೆಗೆ ಬೈಕ್‌ (ಕೆಎ–37/ಇಯು–0208) ನಲ್ಲಿ ಕುಕನೂರು ಕಡೆಯಿಂದ ಯಲಬುರ್ಗಾ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಅತಿವೇಗದಲ್ಲಿ ಬಂದ ಸಿಮೆಂಟ್ ಸಾಗಣೆ ಲಾರಿ (ಕೆಎ–27/ಬಿ–9510) ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸವಾರರು ಲಾರಿಯ ಚಕ್ರದಡಿ ಸಿಲುಕಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ರಸ್ತೆ ಮೇಲೆ ಬೈಕ್ ಅವಶೇಷಗಳು ಚದರಿಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು ಪಟ್ಟಣದ ಲಾರಿ ಚಾಲಕ ಮಲ್ಲಪ್ಪ ತಂದೆ ವೀರಪ್ಪ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರು, “ಲಾರಿ ಅತಿವೇಗದಲ್ಲಿ ಬರುತ್ತಿತ್ತು. ಬೈಕ್ ಸವಾರರು ತಮ್ಮ ಬದಿಯಲ್ಲೇ ಸಾಗುತ್ತಿದ್ದರು. ಆದರೆ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು” ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್.ಅರಸಿದ್ದಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಹೇಮಂತ್ ಕುಮಾರ್, ಯಲಬುರ್ಗಾ ವೃತ್ತದ ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಹಾಗೂ ಕುಕನೂರು ಠಾಣೆಯ ಎಸ್‌ಐ ಎಸ್.ಪಿ. ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಕನೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X