ಕೊಪ್ಪಳ ಜಿಲ್ಲಾಧಿಕಾರಿ, ಸಿಇಓ ವರ್ಗಾವಣೆ :ಸುರೇಶ್ ಇಟ್ನಾಳ್ ನೂತನ ಡಿಸಿ

ಸುರೇಶ್ ಇಟ್ನಾಳ್
ಕೊಪ್ಪಳ: ಜಿಲ್ಲಾಧಿಕಾರಿ ಮತ್ತು ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸುರೇಶ್ ಇಟ್ನಾಳ್ ಮತ್ತು ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಣಿತ್ ನೇಗಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಅದೀನ ಕಾರ್ಯದರ್ಶಿ ಟಿ.ಮಂತೇಶ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಸುರೇಶ್ ಹಿಟ್ನಾಳ್ ಅವರು ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಆಗಿ ಇದ್ದರು. ಜಿಲ್ಲಾಧಿಕಾರಿಯಾಗಿದ್ದ ನಳಿನ್ ಅತುಲ್ ರವರನ್ನು ಕೆಕೆಆರ್ಡಿಬಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜಿಪಂ ಸಿಇಓ ಆಗಿದ್ದ ರಾಹುಲ್ ರತ್ನ ಪಾಂಡೆಯ ಅವರನ್ನು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
Next Story





