Koppal | ಜಿಲ್ಲಾ ಮಟ್ಟದ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ: 6 ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಕೊಪ್ಪಳ: ನಗರದ ಗವಿಸಿದ್ಧೇಶ್ವರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ಮಾಹಿತಿ ಮೇರೆಗೆ ಬುಧವಾರ ಜಿಲ್ಲಾ ಮಟ್ಟದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿ.ಎ. ಮೂರನೇ ಸೆಮಿಸ್ಟರ್ನ ಶ್ರೀದೇವಿ ಪ್ರಥಮ, ರಕ್ಷಿತಾ ದ್ವಿತೀಯ ಹಾಗೂ ಬಿ.ಎ. ಐದನೇ ಸೆಮಿಸ್ಟರ್ನ ಕವಿತಾ ತೃತೀಯ ಸ್ಥಾನ ಪಡೆದರು. ಈ ಮೂವರು ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಬಿ.ಎ. ಐದನೇ ಸೆಮಿಸ್ಟರ್ನ ಕವಿತಾ ಪ್ರಥಮ, ಬಿ.ಕಾಂ. ಮೂರನೇ ಸೆಮಿಸ್ಟರ್ನ ಪಲ್ಲವಿ ದ್ವಿತೀಯ ಹಾಗೂ ಬಿ.ಎ. ಮೂರನೇ ಸೆಮಿಸ್ಟರ್ನ ಮೇಘ ತೃತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ, ಐಕ್ಯೂಎಸಿ ಸಂಚಾಲಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಶುಭ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಠೋಬ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶುಭ ಟಿ.ಇ., ಕನ್ನಡ ವಿಭಾಗದ ಮುಖ್ಯಸ್ಥರಾದ ಲಲಿತ ಕೆ., ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಸುಮಿತ್ರ ಎಸ್.ವಿ., ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಬಿ. ಸೇರಿದಂತೆ ಎಲ್ಲ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಅಭಿನಂದಿಸಿದ್ದಾರೆ ಎಂದು ಚುನಾವಣಾ ಸಾಕ್ಷರತಾ ಸಮಿತಿಯ ಸಂಚಾಲಕರು ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಜ್ಮಾ ಟಿ.ಎಂ.ಆರ್. ತಿಳಿಸಿದ್ದಾರೆ.






