Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಬಾಲಕಾರ್ಮಿಕ ಪದ್ಧತಿ...

Koppal | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ : ಡಿಸಿ ಸುರೇಶ್ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ12 Jun 2026 6:25 PM IST
share
Koppal | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ : ಡಿಸಿ ಸುರೇಶ್ ಇಟ್ನಾಳ
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ, ಕಾನೂನು ಅರಿವು-ನೆರವು ಕಾರ್ಯಕ್ರಮ

ಕೊಪ್ಪಳ, ಜೂ.12: ಕಡ್ಡಾಯ ಶಿಕ್ಷಣವು ಪ್ರತಿಯೊಬ್ಬ ಮಗುವಿನ ಕಾನೂನುಬದ್ಧ ಹಕ್ಕಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕವೇ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಆಯೋಜಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ಸಾಮಾಜಿಕ ಪಿಡುಗಾಗಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಪುನಃ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ಅಗತ್ಯವಾಗಿದ್ದು, ಇದರಿಂದ ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರಗಳಲ್ಲಿ ದುಡಿಸಿಕೊಳ್ಳುವುದು ಕಾನೂನುಬಾಹಿರ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ, ಮಕ್ಕಳಿಗೆ ಅವರ ಹಕ್ಕುಗಳನ್ನು ಒದಗಿಸುವುದು ಕುಟುಂಬ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದರು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ದೇಶದ ಅಭಿವೃದ್ಧಿಗೆ ಅಡ್ಡಿಯಾಗುವ ಸಾಮಾಜಿಕ ಸಮಸ್ಯೆಯಾಗಿದ್ದು, “ಬಾಲ ಕಾರ್ಮಿಕ ಪದ್ಧತಿಯ ತಡೆ: ಮಕ್ಕಳಿಗೆ ನ್ಯಾಯಯುತ ಆಟ, ವಯಸ್ಕರಿಗೆ ಯೋಗ್ಯ ಕೆಲಸ” ಎಂಬ ಈ ವರ್ಷದ ಘೋಷವಾಕ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಾಲಕಾರ್ಮಿಕತೆಯಿಂದ ಮುಕ್ತರಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಲಾ 2,000 ರೂ. ಪ್ರೋತ್ಸಾಹಧನ ವಿತರಿಸಲಾಯಿತು. ಅಲ್ಲದೆ, ಬಾಲಕಾರ್ಮಿಕರಿಂದ ಮುಕ್ತಗೊಂಡ ಮಕ್ಕಳಿಗೆ 35 ಸಾವಿರ ರೂ. ಮೌಲ್ಯದ ಬಾಂಡ್‌ಗಳು ಹಾಗೂ ಪರಿಹಾರ ಧನದ ಚೆಕ್‌ಗಳನ್ನು ವಿತರಿಸಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಬಸನಗೌಡ ಪಾಟೀಲ್, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪ್ರಕಾಶ ಕಡಗದ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ಕೊಪ್ಪಳ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಂಜುಳಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಮಕ್ಕಳು ಮತ್ತು ಮತ್ತಿತರರು ಉಪಸ್ಥಿತರಿದ್ದರು.

Tags

Child LabourEducationKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X