ಕೊಪ್ಪಳ | ಮಾಜಿ ಶಾಸಕ ಶಿವಶರಣಗೌಡ ಪಾಟೀಲ ನಿಧನ

ಕೊಪ್ಪಳ : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಗೌಡ ಪಾಟೀಲ ಅವರು ಬುಧವಾರ ತುಮಕೂರಿನ ಸಿದ್ದಗಂಗಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಿವಶರಣಗೌಡ ಪಾಟೀಲ ಅವರು 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಅದೇ ಅವದಿಗೆ ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮಾಜಿ ಜಿ.ಪಂ ಸದಸ್ಯ ಅರವಿಂದಗೌಡ ಪಾಟೀಲ್ ಸೇರಿ ನಾಲ್ವರು ಪುತ್ರರು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಯಲಬುರ್ಗಾ ಪಟ್ಟಣದ ಪಾಟೀಲ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಬೆಳಿಗ್ಗೆ 9ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹುಣಸಿಹಾಳ ಗ್ರಾಮದಲ್ಲಿ ಗುರುವಾರ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
Next Story





