ಕೊಪ್ಪಳ: ಮಾರಕಾಸ್ತ್ರಗಳಿಂದ ಕೊಚ್ಚಿ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

ಗಂಗಾವತಿ : ನಗರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ರಾಯಚೂರು ರಸ್ತೆಯ ರಿಲಾಯನ್ಸ್ ಮಾರ್ಟ್ ಹತ್ತಿರ ಬುಧವಾರ ತಡರಾತ್ರಿ ನಡೆದಿದೆ.
ಕೆ. ವೆಂಕಟೇಶ ಕೊಲೆಯಾದ ವ್ಯಕ್ತಿ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಸ್ನೇಹಿತರೊಂದಿಗೆ ಊಟ ಮುಗಿಸಿಕೊಂಡು ಬೈಕಿನಲ್ಲಿ ಗಂಗಾವತಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿ ಕೊಂಡು ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಕೊಲೆಯಾದ ಯುವಕ ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಆಪ್ತ ವಲಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಕೊಪ್ಪಳ ಎಸ್.ಪಿ ಡಾ. ರಾಮ ಅರಸಿದ್ದಿಅವರು ಆಗಮಿಸಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ.
Next Story





