Koppala | ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಏಳು ಮಂದಿಗೆ ಗಂಭೀರ ಗಾಯ

ಸ್ಫೋಟದ ತೀವ್ರತೆಗೆ ಮನೆ ಭಾಗಶಃ ಧ್ವಂಸ
ಕೊಪ್ಪಳ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಗಂಗಾವತಿ ತಾಲೂಕಿನ ಹೆಬ್ಬಾಳದಲ್ಲಿ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ರಾಜು, ದುರಗೆಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಶ್ರೀಕಾಂತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಭಾಗಶಃ ಧ್ವಂಸಗೊಂಡಿದೆ.
ಖಾಲಿಯಾದ ಬದಲಿಸಿ ಹೊಸ ಸಿಲಿಂಡರ್ ಅಳವಡಿಸಿದ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆಯಾದರೂರೆ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





