ಕೊಪ್ಪಳ | ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ : ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಆದೇಶ

ಕೊಪ್ಪಳ: ಗಂಗಾವತಿ ನಗರದಲ್ಲಿ ಡಿಸೆಂಬರ್ 3ರಂದು ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21 ರನ್ವಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ 10 ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 2ರ ಸಂಜೆ 6 ಗಂಟೆಯಿಂದ ಡಿಸೆಂಬರ್ 3ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಗಂಗಾವತಿ ನಗರದಲ್ಲಿ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಿಮಿತ್ತ ಪವಮಾನ ಹೋಮ ಹಾಗೂ ಮಾಲಾ ವಿಸರ್ಜನೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆ, ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸಾವಿರಾರು ಭಕ್ತರು ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಲಾಗಿದೆ. ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.







