Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ : ಗುಡುಗು ಸಿಡಿಲು ಸಹಿತ ಭಾರೀ...

ಕೊಪ್ಪಳ : ಗುಡುಗು ಸಿಡಿಲು ಸಹಿತ ಭಾರೀ ಮಳೆ; ಜಾನುವಾರುಗಳು ಸಾವು, ಬೆಳೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ18 May 2026 12:19 PM IST
share
ಕೊಪ್ಪಳ : ಗುಡುಗು ಸಿಡಿಲು ಸಹಿತ ಭಾರೀ ಮಳೆ; ಜಾನುವಾರುಗಳು ಸಾವು, ಬೆಳೆಗಳಿಗೆ ಹಾನಿ

ಯಲಬುರ್ಗಾ : ಪಟ್ಟಣದಲ್ಲಿ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆ, ಬಿರುಗಾಳಿ ಹಾಗೂ ಗುಡುಗು ಸಿಡಿಲಿನ ಅಬ್ಬರಕ್ಕೆ ಪ್ರತ್ಯೇಕ ಎರಡು ಘಟನೆಗಳಲ್ಲಿ ಒಂದು ಎಮ್ಮೆ ಮತ್ತು ಒಂದು ಎತ್ತು ಸಾವನ್ನಪ್ಪಿದ್ದು, ಹಲವೆಡೆ ಬೆಳೆಗಳಿಗೆ ಹಾನಿಯಾಗಿದೆ.

ಸಂಜೆ ಆರಂಭವಾದ ಮಳೆ ಮೊದಲು ಸಾಧಾರಣವಾಗಿ ಸುರಿದರೂ, ಬಳಿಕ ಬಿರುಗಾಳಿ ಹಾಗೂ ಸಿಡಿಲಿನ ಆರ್ಭಟದೊಂದಿಗೆ ತೀವ್ರಗೊಂಡಿದೆ. ಪಟ್ಟಣದ ಹೊರವಲಯದಲ್ಲಿ ಮನೆಗಳಿಗೆ ಅಳವಡಿಸಿದ್ದ ತಗಡುಗಳು ಗಾಳಿಯ ಅಬ್ಬರಕ್ಕೆ ಹಾರಿ ಹೋಗಿವೆ.

ಯಲಬುರ್ಗಾ ತಾಲೂಕಿನ ದಮ್ಮೂರು ಗ್ರಾಮದ ರೈತ ವಿರೂಪಣ್ಣ ಹಳ್ಳಿಕೇರಿ ಅವರಿಗೆ ಸೇರಿದ ಎಮ್ಮೆ, ಹಗೇದಾಳ ಗ್ರಾಮದ ನೀಲಪ್ಪ ಚೂರಿ ಅವರಿಗೆ ಸೇರಿದ ಎತ್ತು ಸಿಡಿಲು ಬಡಿದು ಸಾವನ್ನಪ್ಪಿದೆ. ದಮ್ಮೂರು ಗ್ರಾಮದ ಅನೇಕ ರೈತರ ತೋಟಗಳಲ್ಲಿ ಬೆಳೆದಿದ್ದ ವಿವಿಧ ಬೆಳೆಗಳು ಭಾರೀ ಗಾಳಿಗೆ ನೆಲಕ್ಕುರುಳಿವೆ. ಈ ಘಟನೆಗಳಿಂದ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.

ಮಾರನಾಳ ಗ್ರಾಮದ ಶಂಕ್ರಪ್ಪ ಗುಳಗುಳಿ ಅವರಿಗೆ ಸೇರಿದ ಎಲೆಬಳ್ಳಿ ತೋಟಕ್ಕೂ ಭಾರಿ ಹಾನಿಯಾಗಿದ್ದು, ಬೆಳೆ ಸಂಪೂರ್ಣ ನೆಲಕ್ಕುರುಳಿದೆ. ಆಸುಪಾಸಿನ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಯಲಬುರ್ಗಾ ಪಟ್ಟಣದ ಮಲ್ಕ ಸಮುದ್ರ ರಸ್ತೆಯಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಮರಗಳು ಮುರಿದು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು.

ಮಾಹಿತಿ ತಿಳಿದು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆ ಹಾಗೂ ಸಿಡಿಲಿನಿಂದ ಹಾನಿಗೊಳಗಾದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags

KoppalHeavy rainthunderlightningLivestockcrops
share
ವಾರ್ತಾಭಾರತಿ
ವಾರ್ತಾಭಾರತಿ
Next Story
X