ಕೊಪ್ಪಳ: ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಕೊಪ್ಪಳ: ಮಾರಾಟಕ್ಕಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಪ್ಪಳ ನಗರ ಠಾಣೆ ಪೊಲೀಸರು ಬಂಧಿಸಿ, ಅಂದಾಜು 450 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕೊಪ್ಪಳ ನಗರ ಠಾಣೆ ಇನ್ಸ್ಪೆಕ್ಟರ್ ಸುರೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಿ. ಹೊಸಳ್ಳಿ ಗ್ರಾಮದ ಮೈಲಾರಪ್ಪ ಎಂಬಾತನನ್ನು ಬಂಧಿಸಲಾಗಿದೆ.
ಮೈಲಾರಪ್ಪ ಇಂದು ಕೊಪ್ಪಳಕ್ಕೆ ಮಾರಾಟ ಮಾಡಲು ಗಾಂಜಾ ತರುತ್ತಿದ್ದ ಎನ್ನಲಾಗಿದ್ದು, ಕೊಪ್ಪಳದ ಕಾತರಕಿ ರಸ್ತೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಂದಾಜು 450 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
Next Story




