Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಬರ ಪರಿಸ್ಥಿತಿ ಅವಲೋಕಿಸಿದ...

Koppal | ಬರ ಪರಿಸ್ಥಿತಿ ಅವಲೋಕಿಸಿದ ಸಚಿವರು; ರೈತರಿಗೆ ನ್ಯಾಯಯುತ ಪರಿಹಾರದ ಭರವಸೆ

ವಾರ್ತಾಭಾರತಿವಾರ್ತಾಭಾರತಿ6 Aug 2026 7:21 PM IST
share
Koppal | ಬರ ಪರಿಸ್ಥಿತಿ ಅವಲೋಕಿಸಿದ ಸಚಿವರು; ರೈತರಿಗೆ ನ್ಯಾಯಯುತ ಪರಿಹಾರದ ಭರವಸೆ
ಕುಷ್ಟಗಿ, ಕುಕನೂರ, ಯಲಬುರ್ಗಾ, ಕೊಪ್ಪಳ ತಾಲೂಕುಗಳಲ್ಲಿ ಸಂಚಾರ

ಕೊಪ್ಪಳ : ರಾಜ್ಯ ಸರ್ಕಾರದ ಸಂಪುಟ ದರ್ಜೆ ಸಚಿವರಾದ ಶಿವರಾಜ ಎಸ್. ತಂಗಡಗಿ ಹಾಗೂ ಬಸವರಾಜ ರಾಯರೆಡ್ಡಿ ಅವರು ಗುರುವಾರ ತವರು ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಜಿ ಸಂಸದ ಸಂಗಣ್ಣ ಕರಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್, ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹಾಗೂ ಕೃಷಿ, ತೋಟಗಾರಿಕೆ, ಪಶುಪಾಲನೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಕುಷ್ಟಗಿ, ಕುಕನೂರು, ಯಲಬುರ್ಗಾ ಹಾಗೂ ಕೊಪ್ಪಳ ತಾಲೂಕುಗಳಲ್ಲಿ ಬೆಳೆಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಕುಷ್ಟಗಿ ತಾಲೂಕಿನ ನವಲಹಳ್ಳಿಯಲ್ಲಿ ಮೆಕ್ಕೆಜೋಳ, ತೊಗರಿ ಹಾಗೂ ಸಜ್ಜೆ ಬೆಳೆಗಳ ಹಾನಿಯನ್ನು ಪರಿಶೀಲಿಸಿದ ಸಚಿವರು, ಬಳಿಕ ಕುಕನೂರು ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ರೈತ ಸೋಮಶೇಖರಯ್ಯ ಗಣಾಚಾರಿ ಅವರ ಹೆಸರು ಬೆಳೆ, ರೈತ ಸಂಗಪ್ಪ ಶಿವರೆಡ್ಡಿ ಅವರ ಸೂರ್ಯಕಾಂತಿ ಬೆಳೆ ಹಾಗೂ ರಾಜೂರ ಗ್ರಾಮದಲ್ಲಿ ಸಫಿಯಾಬೇಗಂ ನದಾಫ ಅವರ ಹೆಸರು ಬೆಳೆ ಮಳೆಯ ಕೊರತೆಯಿಂದ ಹಾನಿಗೀಡಾಗಿರುವುದನ್ನು ವೀಕ್ಷಿಸಿದರು.

ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಪ್ರವಾಸದ ವೇಳೆ ರಾಜೂರ ಗ್ರಾಮದಲ್ಲಿ ರೈತರೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಶೇ.32 ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ. ಬಿತ್ತನೆ ಪ್ರಮಾಣವೂ ಗಣನೀಯವಾಗಿ ಕುಸಿದಿದ್ದು, ಸರ್ಕಾರ ಪರಿಸ್ಥಿತಿಯನ್ನು ಸಮೀಪದಿಂದ ಗಮನಿಸುತ್ತಿದೆ. ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ತೊಗರಿ, ಹೆಸರು, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ. ಜಿಲ್ಲೆಯಿಂದ ವಸ್ತುನಿಷ್ಠ ವರದಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಆಧರಿಸಿ ಬರ ಘೋಷಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಶೇ.40ರಷ್ಟು ಮಳೆ ಕೊರತೆಯಾಗಿದ್ದು, ಕೇವಲ ಶೇ.63ರಷ್ಟು ಮಾತ್ರ ಬಿತ್ತನೆಯಾಗಿದೆ. ಅಧಿಕಾರಿಗಳು ಕ್ಷೇತ್ರ ಭೇಟಿ ನಡೆಸಿ ಬೆಳೆಹಾನಿಯ ಕುರಿತು ಛಾಯಾಚಿತ್ರ ಹಾಗೂ ವಿಡಿಯೊ ದಾಖಲೆಗಳೊಂದಿಗೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಿದ್ದಾರೆ. ಈಗಾಗಲೇ ಜಿಲ್ಲೆಯ 1.56 ಲಕ್ಷ ರೈತರು ಬೆಳೆ ವಿಮೆ ಪ್ರೀಮಿಯಂ ಪಾವತಿಸಿದ್ದು, ಪರ್ಯಾಯ ಕೃಷಿ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ವಾಡಿಕೆಯಂತೆ 158 ಮಿ.ಮೀ. ಮಳೆಯಾಗಬೇಕಿದ್ದರೆ ಕೇವಲ 98 ಮಿ.ಮೀ. ಮಳೆಯಾಗಿದೆ. ಯಲಬುರ್ಗಾ ತಾಲೂಕಿನಲ್ಲಿ ಶೇ.35 ಹಾಗೂ ಕುಕನೂರು ತಾಲೂಕಿನಲ್ಲಿ ಶೇ.24ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಕೊಪ್ಪಳ ಸಹಾಯಕ ಆಯುಕ್ತರಾದ ಮೆಹಬೂಬ ಜಿಲಾನಿ, ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಜಂಟಿ ತೋಟಗಾರಿಕಾ ನಿರ್ದೇಶಕರಾದ ಕೃಷ್ಣ ಉಕ್ಕುಂದ, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಯ್ಯ, ಕೃಷಿ ಇಲಾಖೆಯ ತಾಲೂಕು ಅಧಿಕಾರಿಗಳಾದ ಪ್ರಮೋದ ತುಂಬಳ, ಶಿವಪ್ಪ ಕೊಂಡಗುರಿ, ಎಸ್ ಸಿ ಚಿಂಚಲಿ ಸೇರಿದಂತೆ ಇತರರು ಇದ್ದರು.

Tags

farmersdroughtKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X