Koppal | ರಸ್ತೆಯಲ್ಲಿ ನವಜಾತ ಗಂಡು ಮಗು ಪತ್ತೆ

ಕೊಪ್ಪಳ : ನಗರದ ಶ್ರೀಶೈಲ ನಗರದ 3ನೇ ವಾರ್ಡ್‌ನ ರಸ್ತೆ ಬದಿಯಲ್ಲಿ ನವಜಾತ ಗಂಡು ಮಗುವನ್ನು ಯಾರೋ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ.
ರಸ್ತೆ ಬದಿಯಲ್ಲಿ ಮಗು ಅಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಮಗುವನ್ನು ರಕ್ಷಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.
ಈ ಕುರಿತು ವಾರ್ತಾಭಾರತಿ ಜೊತೆ ಮಾತನಾಡಿದ ಕೊಪ್ಪಳ ಕಿಮ್ಸ್ ಆಡಳಿತ ಮಂಡಳಿ ಸದಸ್ಯ ಸಲೀಂ ಅಳವಂಡಿ, ಮಗು ಸುರಕ್ಷಿತವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಗು ಯಾರುದ್ದು, ಯಾವ ಕಾರಣಕ್ಕೆ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.
Next Story




