Koppal | ಬೆದವಟ್ಟಿ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕೊಪ್ಪಳ/ಕುಕನೂರು : ತಾಲೂಕಿನ ಬೆದವಟ್ಟಿ ಗ್ರಾಮದ ಸಮೀಪದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ಮಂಗಳವಾರ ಬೆಳಿಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ.
ಬ್ಯಾರೇಜ್‌ನಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ, ಜಲಜೀವನ್ ಮಿಷನ್ ಯೋಜನೆಯ ನೀರಿನ ಪೈಪ್ ಸಮೀಪ ಶಿಶುವಿನ ಮೃತದೇಹ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಶಿಶುವನ್ನು ನೀರಿಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆಗೆ ಕಾರಣರಾದವರ ಪತ್ತೆಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
Next Story




