ಕೊಪ್ಪಳ | ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ಸುರೇಶ ಇಟ್ನಾಳ

ಕೊಪ್ಪಳ, ಡಿ.11: ಕೊಪ್ಪಳ ಜಿಲ್ಲೆ ಕೃಷಿ ಪ್ರಾಧಾನ್ಯತೆ ಹೊಂದಿರುವ ಜಿಲ್ಲೆಯಾಗಿದ್ದು, ರೈತರು ಸಿರಿ ಧಾನ್ಯ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದ್ದಾರೆ.
ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕೊಪಳ ಇವರ ಸಹಯೋಗದಲ್ಲಿ ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳ 2026ರ ಅಂಗವಾಗಿ ಆಯೋಜಿಸಿದ್ದ ಸಿರಿಧಾನ್ಯ ಮೇಳ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ ಅವರು, ಕರ್ನಾಟಕ ರಾಜ್ಯದ ಒಟ್ಟು ಗ್ರೀನ್ ಪ್ರಾಡಕ್ಟ್‌ನಲ್ಲಿ ಸುಮಾರು ಶೇ.10 ರಷ್ಟು ಕೊಪ್ಪಳ ಜಿಲ್ಲೆಯ ಪಾಲನ್ನು ನಾವು ಕಾಣುತ್ತವೆ. ನಮ್ಮ ಜಿಲ್ಲೆಯನ್ನು ಭತ್ತದ ಕಣಜ ಎಂದು ಸಹ ಕರೆಯಲಾಗುತ್ತದೆ. ಕೇವಲ ಭತ್ತಕ್ಕೆ ಮಾತ್ರ ಆದ್ಯತೆ ನೀಡದೆ ಸಿರಿ ಧಾನ್ಯ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕು. ಸಿರಿಧಾನ್ಯಗಳನ್ನು ತಿನ್ನುವುದರಿಂದ ದೇಹಕ್ಕೆ ಪೈಬರ್ ಅಂಶ ದೊರೆಯುತ್ತೆ ಮತ್ತು ಇದರಿಂದ ಮನುಷ್ಯ ಆರೋಗ್ಯವಾಗಿರುತ್ತಾನೆ. ನಮ್ಮ ಜಿಲ್ಲೆಯಲ್ಲಿ ಒಟ್ಟು 6 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಗಳನ್ನು ಬೆಳೆಯಲಾಗುತ್ತಿದೆ ಎಂದು ತಿಳಿಸಿದರು.
ಜಿ.ಡಿ ಕೃಷ್ಣಮೂರ್ತಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾನಿಲಯದ ಮುಖ್ಯಸ್ಥೆ ಯೋಗಿನಿ, ಇಟಗಿಯ ಡಾ. ಗುರುಶಾಂತವೀರ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿದರು. ಈ ಸಂದರ್ದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಉಪ ಕೃಷಿ ನಿರ್ದೇಶಕ ಎಲ್.ಸಿದ್ದೇಶ್ವರ, ಕೃಷಿ ತಂತ್ರಜ್ಞಾನ ಸಂಸ್ಥೆಯ ಮುಖ್ಯಸ್ಥ ವೀರಣ್ಣ ಕಮತರ್ ಸಹಿತ ಜಿಲ್ಲೆಯ ಎಲ್ಲ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ವಿಸ್ತರಣ ಶಿಕ್ಷಣ ಕೇಂದ್ರದ ಅಧಿಕಾರಿಗಳು, ಜಿಲ್ಲಾ ಕೃಷಿ ಪರಿಕರ ಮಾರಾಟಗಾರರು, ಪೊಲೀಸ್ ಸಿಬ್ಬಂದಿ ಹಾಗೂ ಕೃಷಿ ಇಲಾಖೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.







