ಕೊಪ್ಪಳ| ಮನರೇಗಾ ಯೋಜನೆ ಮರುನಾಮಕರಣ ವಿರೋಧಿಸಿ ಪ್ರತಿಭಟನೆ

ಕೊಪ್ಪಳ: ಯುಪಿಎ ಸರಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್‌ಗಾಗಿ ವಿಕ್ಷಿತ್ ಭಾರತ್ ಗ್ಯಾರಂಟಿ ಎಂದು ಬದಲಾಯಿಸುವ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ವಿರೋಧಿಸಿ ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘ ನಗರದ ಕನಕದಾಸ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ( MGNREGA ) "ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ" ಎಂದು ಮರುನಾಮಕರಣ ಮಾಡುವ ಕೇಂದ್ರ ಸಚಿವ ಸಂಪುಟದ ನಿರ್ಧಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಮರಕುಂಬಿ, ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ,ಜಿಲ್ಲಾ ಸಹ ಕಾರ್ಯದರ್ಶಿ ಹುಸೇನಪ್ಪಾ, ಕೆ.ರಾಮಣ್ಣ ದೊಡ್ಡಮನಿ, ಹುಸೇನ್ ಸಾಬ್ ನದಾಫ್, ಕಾಲೇಸಾಬ ಕರಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Next Story





