Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಜ್ಞಾನೇಶ್ ಕುಮಾರ್ ವಿರುದ್ಧದ...

Koppal | ಜ್ಞಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Sept 2026 6:28 PM IST
share
Koppal | ಜ್ಞಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಅಶೋಕ ವೃತ್ತದಲ್ಲಿ ಮುಖ್ಯ ಚುನಾವಣಾ ಆಯುಕ್ತ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಹೋರಾಟಗಾರರು, ಚುನಾವಣಾ ಆಯೋಗದೊಳಗಿನ ನಿರ್ಧಾರ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಆರೋಪಿಸಿದರು.

ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ನೋಂದಣಿ, ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ಮರು ಸೇರ್ಪಡೆ ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಹಲವು ನಿರ್ಧಾರಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾಗಿದೆ ಎನ್ನಲಾದವರ ಹೆಸರುಗಳನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪಾರದರ್ಶಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿ.ಐ.ಟಿ.ಯು ಜಿಲ್ಲಾ ಮುಖಂಡ ಖಾಸೀಮ್ ಸರ್ದಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ್ ಶೀಲವಂತರ್, ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಐ.ಎಫ್.ಟಿ.ಯು ಜಿಲ್ಲಾ ಸಂಚಾಲಕ ತುಕಾರಾಮ್ ಪಾತ್ರೋಟಿ, ಗಂಗಾವತಿ ತಾಲೂಕು ಸಂಚಾಲಕ ಚಾಂದ್ ಪಾಷಾ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಅಧ್ಯಕ್ಷ ಮುದುಕಪ್ಪ ಹೊಸಮನಿ, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಮಖಬೂಲ್ ರಾಯಚೂರು.ಸಿ.ಐ.ಟಿ.ಯು. ಕಾರ್ಮಿಕ ಮುಖಂಡರಾದ ಹನುಮೇಶ ಕಲ್ಮಂಗಿ, ಜಾಫರ್ ಕುರಿ, ಗಾಳೆಪ್ಪ ಮುಂಗೋಲಿ,ಸುಭಾನ್ ಸಾಬ್, ಷಣ್ಮುಖಪ್ಪ, ಮಿರಾಸಾಬ್ ಬನ್ನಿಗೊಳ ಹಾಗೂ ಆದಿತ್ಯ ಟಿ. ಪಾತ್ರೋಟಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

Tags

Gyanesh KumarprotestKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X