ಕೊಪ್ಪಳ | ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಪರಾರಿಯಾಗಿದ್ದ ಮತ್ತೋರ್ವ ಆರೋಪಿಯ ಸೆರೆ

ಕೊಪ್ಪಳ : ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಒಬ್ಬನನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇನೊರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಯಿರಾಂ ಮೂರನೇ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಲಾದ ಮಲ್ಲೇಶ್(22) ಮತ್ತು ಚೇತನ್ ಸಾಯಿ ಸಿಳ್ಳೇಕ್ಯಾತರ್(21) ಇಬ್ಬರು ಅರೋಪಿಗಳನ್ನು ನಿನ್ನೆ ಬಂಧಿಸಲಾಗಿತ್ತು. ಮೂರನೇ ಆರೋಪಿಯು ಮಾತ್ರ ತಲೆಮರೆಸಿಕೊಂಡಿದ್ದ. ಹಾಗಾಗಿ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು. ಇಂದು ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Next Story