Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | 11-ಎ ವಿತರಣಾ ಕಾಲುವೆವರೆಗೆ...

Koppal | 11-ಎ ವಿತರಣಾ ಕಾಲುವೆವರೆಗೆ ನೀರು ಹರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ21 July 2026 6:52 PM IST
share
Koppal | 11-ಎ ವಿತರಣಾ ಕಾಲುವೆವರೆಗೆ ನೀರು ಹರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಕೊಪ್ಪಳ: ವಿಜಯನಗರ ಎಡದಂಡೆ ಮುಖ್ಯ ಕಾಲುವೆಯ 11-ಎ ವಿತರಣಾ ಕಾಲುವೆವರೆಗೆ ತಕ್ಷಣ 1.5 TMC ನೀರು ಹರಿಸಬೇಕು ಎಂದು ಆಗ್ರಹಿಸಿ ರೈತರು ಹಾಗೂ ಜನಪ್ರತಿನಿಧಿಗಳ ನಿಯೋಗ ಮಂಗಳವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಮುನಿರಾಬಾದ್‌ನ ತುಂಗಭದ್ರಾ ಜಲಾಶಯದ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕೈಗೊಂಡ ತೀರ್ಮಾನದಂತೆ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಡಾ. ಬಸವರಾಜ್ ಕ್ಯಾವಟರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ರೈತ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ನಿಯೋಗವು, ಕೊರಗಲ್ ಅಣೆಕಟ್ಟಿನ ಕಾಲುವೆಗಳ ಹಕ್ಕಿನಡಿ ವಿಜಯನಗರ ಎಡದಂಡೆ ಮುಖ್ಯ ಕಾಲುವೆ ವ್ಯಾಪ್ತಿಯ ಸಾವಿರಾರು ಎಕರೆ ಕೃಷಿಭೂಮಿಗೆ ಶತಮಾನಗಳಿಂದ ನೀರು ಪೂರೈಕೆಯಾಗುತ್ತಿದ್ದು, ಈ ಭಾಗದ ರೈತರು, ಜನರು ಹಾಗೂ ಜಾನುವಾರುಗಳು ಇದೇ ನೀರನ್ನು ಅವಲಂಬಿಸಿ ಬದುಕುತ್ತಿವೆ ಎಂದು ವಿವರಿಸಿತು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯು ವಿಜಯನಗರ ಕಾಲುವೆಗಳ ವಾರ್ಷಿಕ 5.71 TMC ಐತಿಹಾಸಿಕ ನೀರಿನ ಬಳಕೆಯನ್ನು ಅಧಿಕೃತವಾಗಿ ಗುರುತಿಸಿದ್ದು, ಹೊಸ ಯೋಜನೆಗಳಿಗಿಂತ ಈ ಬಳಕೆಗೆ ಆದ್ಯತೆ ನೀಡಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ವಿಜಯನಗರ ಎಡದಂಡೆಯ 11-ಎ ಉಪ ಕಾಲುವೆವರೆಗೆ 1.5 TMC ನೀರು ಬಿಡುಗಡೆ ಮಾಡುವುದು ಈ ಭಾಗದ ರೈತರ ಐತಿಹಾಸಿಕ ಹಾಗೂ ಕಾನೂನುಬದ್ಧ ಹಕ್ಕಾಗಿದೆ. ರೈತರ ಹಕ್ಕಿಗೆ ಧಕ್ಕೆಯಾಗದಂತೆ 11-ಎ ವಿತರಣಾ ಕಾಲುವೆಯ ಕೊನೆಯ ಭಾಗದವರೆಗೂ ತಕ್ಷಣ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ನಿಯೋಗದಲ್ಲಿ ನವೀನ ಗುಳಗಣ್ಣವರ್, ಪ್ರಭುರಾಜ ಪಾಟೀಲ್, ಪ್ರದೀಪ್ ಹಿಟ್ನಾಳ, ಸುನಿಲ್ ಹೆಸರೂರು, ಅಶೋಕ ಗುಲದಳ್ಳಿ, ಬಸವರಾಜ್ ಉಳ್ಳಾಗಡ್ಡಿ , ಖಾಜಾ ಹುಸೇನ್ ಹೊಸಳ್ಳಿ ಹಾಗೂ ವಿವಿಧ ಗ್ರಾಮಗಳ ರೈತ ಮುಖಂಡರು ಉಪಸ್ಥಿತರಿದ್ದರು.




Tags

canalKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X