ಕೊಪ್ಪಳ| ಬೆಣಕಲ್‌ನಲ್ಲಿ ಜನಸಂಪರ್ಕ ಸಭೆ ವೇಳೆ ಶಾಸಕ ಬಸವರಾಜ ರಾಯರೆಡ್ಡಿ ಮೇಲೆ ಕಲ್ಲೆಸೆತ

ಕುಕನೂರು: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ರವಿವಾರ ರಾತ್ರಿ ಆಯೋಜಿಸಿದ್ದ ಜನಸಂಪರ್ಕ ಸಭೆ ಕಾರ್ಯಕ್ರಮದ ವೇಳೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ.
ಗ್ರಾಮದ ಅನ್ನದಾನೇಶ್ವರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರು ತಮ್ಮ ಸರಕಾರದ ಸಾಧನೆಗಳನ್ನು ನೆರೆದ ಜನತೆಗೆ ವಿವರಿಸುತ್ತಿದ್ದ ಸಂದರ್ಭದಲ್ಲಿ, ಅವರ ಮುಂದೆ ಅಕಸ್ಮಾತ್ತಾಗಿ ಕಲ್ಲೊಂದು ಬಿದ್ದಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ, ಮಾನಸಿಕ ಅಸ್ವಸ್ಥನೊಬ್ಬ ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ.
Next Story





