Koppal | ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ : ಕಾಸನಕಂಡಿ ಸಮೀಪ ಚಿರತೆ ಸೆರೆ

ಕೊಪ್ಪಳ : ಮುನಿರಾಬಾದ್ ಸಮೀಪದ ಕಾಸನಕಂಡಿ ಗ್ರಾಮದ ಬಳಿ ಇರುವ ಐಆರ್‌ಬಿ ಹಾಗೂ ಕೆಎಸ್‌ಆರ್‌ಪಿ ತರಬೇತಿ ಕೇಂದ್ರದ ಸಮೀಪ ಕಳೆದ ಕೆಲವು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಬಿದ್ದಿದೆ.
ಸುಮಾರು ಎರಡು ವರ್ಷ ಪ್ರಾಯದ ಈ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸೆರೆಹಿಡಿದು, ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕಮಲಾಪುರ ಮೃಗಾಲಯಕ್ಕೆರವಾನಿಸಿದರು.
ಚಿರತೆಯ ಓಡಾಟದಿಂದ ಆತಂಕಗೊಂಡಿದ್ದ ಐಆರ್‌ಬಿ ಹಾಗೂ ಕೆಎಸ್‌ಆರ್‌ಪಿ ತರಬೇತಿ ಕೇಂದ್ರದ ಸಿಬ್ಬಂದಿ, ಅವರ ಕುಟುಂಬಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಚಿರತೆ ಸೆರೆ ಸಿಕ್ಕ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿದ್ದಾರೆ.
ಚಿರತೆ ಕಾಣಿಸಿಕೊಂಡಿದ್ದ ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ಸ್ಥಳದಲ್ಲಿ ಬೋನು ಅಳವಡಿಸಿ ನಿರಂತರ ನಿಗಾವಹಿಸಿತ್ತು.
ಯಶಸ್ವಿ ಕಾರ್ಯಾಚರಣೆಯ ಮೂಲಕ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಇಲಾಖೆ ಯಶಸ್ವಿಯಾಗಿದೆ.
Next Story




