Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ‘10 ಸಾವಿರ ಕೋಟಿ ರೂ. ಅನುದಾನ...

Koppal | ‘10 ಸಾವಿರ ಕೋಟಿ ರೂ. ಅನುದಾನ ಎಲ್ಲಿಗೆ ಖರ್ಚಾಗಿದೆ?’: ಸಲೀಂ ಖಾದ್ರಿ ಪ್ರಶ್ನೆ

"ಅನುದಾನದ ಸಂಪೂರ್ಣ ವಿವರವನ್ನು ಕ್ಷೇತ್ರದ ಜನರ ಮುಂದೆ ಬಹಿರಂಗಪಡಿಸಲಿ"

ವಾರ್ತಾಭಾರತಿವಾರ್ತಾಭಾರತಿ3 Oct 2026 7:13 PM IST
share
Koppal | ‘10 ಸಾವಿರ ಕೋಟಿ ರೂ. ಅನುದಾನ ಎಲ್ಲಿಗೆ ಖರ್ಚಾಗಿದೆ?’: ಸಲೀಂ ಖಾದ್ರಿ ಪ್ರಶ್ನೆ

ಕೊಪ್ಪಳ : ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕಳೆದ 13 ವರ್ಷಗಳಲ್ಲಿ 10 ಸಾವಿರ ಕೋಟಿ ರೂ. ಗೂ ಅಧಿಕ ಅನುದಾನ ತಂದಿದ್ದೇನೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಇತ್ತೀಚೆಗೆ ಹೇಳಿರುವುದು ವರದಿಯಾಗಿದೆ. ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಿರುವುದೂ ವರದಿಯಾಗಿದೆ. ಆದರೆ, ಈ 10 ಸಾವಿರ ಕೋಟಿ ರೂ. ಅನುದಾನ ಎಲ್ಲಿಗೆ ಖರ್ಚಾಗಿದೆ?’ ಎಂಬ ಪ್ರಶ್ನೆಗೆ ಕ್ಷೇತ್ರದ ಜನರಿಗೆ ಶಾಸಕರು ಸ್ಪಷ್ಟ ಉತ್ತರ ನೀಡಬೇಕು ಎಂದು ಎಸ್‌ಡಿಪಿಐ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಲೀಂ ಖಾದ್ರಿ ಆಗ್ರಹಿಸಿದ್ದಾರೆ.

ಶಾಸಕರು 10 ಸಾವಿರ ಕೋಟಿ ರೂ. ಗೂ ಅಧಿಕ ಅನುದಾನ ತಂದಿದ್ದರೆ, ಯಾವ ಇಲಾಖೆಯಿಂದ ಎಷ್ಟು ಅನುದಾನ ಬಂದಿದೆ, ಯಾವ ಕಾಮಗಾರಿಗೆ ಎಷ್ಟು ಹಣ ಮಂಜೂರಾಗಿದೆ, ಯಾವ ಕಾಮಗಾರಿ ಪೂರ್ಣಗೊಂಡಿದೆ ಹಾಗೂ ಯಾವ ಕಾಮಗಾರಿಗೆ ಎಷ್ಟು ಹಣ ಖರ್ಚಾಗಿದೆ ಎಂಬ ಸಂಪೂರ್ಣ ವಿವರವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಈ ಕುರಿತು ಶ್ವೇತಪತ್ರ ಹೊರಡಿಸುವಂತೆ ಈಗಾಗಲೇ ಸಾರ್ವಜನಿಕವಾಗಿ ಆಗ್ರಹಗಳು ಕೇಳಿಬಂದಿವೆ ಎಂದು ಅವರು ತಿಳಿಸಿದ್ದಾರೆ.

ಕೊಪ್ಪಳ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರೂ ದೊಡ್ಡ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಅವರ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದಲ್ಲಿ ಎಷ್ಟು ಮೊತ್ತ ಮೀಸಲಿಡಲಾಗಿದೆ ಹಾಗೂ ಎಷ್ಟು ಖರ್ಚಾಗಿದೆ ಎಂಬುದನ್ನೂ ಶಾಸಕರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಶಾದಿ ಮಹಲ್‌ಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಲಾಗಿದೆ? ಮೌಲಾನಾ ಆಜಾದ್ ಶಾಲೆಗಳಿಗೆ ಸ್ವಂತ ಹಾಗೂ ಸುಸಜ್ಜಿತ ಕಟ್ಟಡಗಳ ವ್ಯವಸ್ಥೆ ಮಾಡಲಾಗಿದೆಯೇ? ಉರ್ದು ಮತ್ತು ಕನ್ನಡ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯದ ಸಮಸ್ಯೆಗಳನ್ನು ಎಷ್ಟು ಶಾಲೆಗಳಲ್ಲಿ ಪರಿಹರಿಸಲಾಗಿದೆ? ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು ವಾಸಿಸುವ ಬಡಾವಣೆಗಳಲ್ಲಿ ಕೈಗೊಂಡಿರುವ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಎಷ್ಟು ಅನುದಾನ ನೀಡಲಾಗಿದೆ ಹಾಗೂ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ವಿವರವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅದೇ ರೀತಿ ಎಸ್‌ಸಿ/ಎಸ್‌ಟಿ ಸಮುದಾಯಗಳ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಲಾಗಿದೆ, ಹಿಂದೂ ಸಮುದಾಯದ ಸ್ಮಶಾನಗಳ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಲಾಗಿದೆ, ಮುಸ್ಲಿಂ ಖಬರಸ್ಥಾನಗಳ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಲಾಗಿದೆ ಹಾಗೂ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ಕಲ್ಪಿಸಲು ಎಷ್ಟು ಅನುದಾನ ನೀಡಲಾಗಿದೆ ಎಂಬುದನ್ನೂ ಕಾಮಗಾರಿ-ವಾರು ಹಾಗೂ ಅನುದಾನ-ವಾರು ಲೆಕ್ಕದಲ್ಲಿ ಸಾರ್ವಜನಿಕರ ಮುಂದಿಡಬೇಕು ಎಂದು ಸಲೀಂ ಖಾದ್ರಿ ಆಗ್ರಹಿಸಿದ್ದಾರೆ.

‘10 ಸಾವಿರ ಕೋಟಿ ರೂ. ಗೂ ಅಧಿಕ ಅನುದಾನ ತಂದಿದ್ದೇನೆ’ ಎಂಬ ಹೇಳಿಕೆ ನಿಜವಾಗಿದ್ದರೆ, ಅದರ ದಾಖಲೆಗಳು ಹಾಗೂ ಕಾಮಗಾರಿಗಳ ಸಂಪೂರ್ಣ ವಿವರ ನೀಡುವುದರಲ್ಲಿ ಯಾವುದೇ ಗೊಂದಲ ಇರಬಾರದು. ಅಭಿವೃದ್ಧಿಯ ಅಂಕಿ-ಅಂಶಗಳು ಭಾಷಣಗಳಲ್ಲಿ ಮಾತ್ರವಲ್ಲದೆ, ಕ್ಷೇತ್ರದ ನೆಲಮಟ್ಟದಲ್ಲಿಯೂ ಕಾಣಬೇಕು ಎಂದು ಅವರು ತಿಳಿಸಿದ್ದಾರೆ.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X