Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಬಸ್ ಹತ್ತುವ ವೇಳೆ...

Koppal | ಬಸ್ ಹತ್ತುವ ವೇಳೆ ನೂಕುನುಗ್ಗಲು: ಮಹಿಳೆ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ27 Aug 2026 8:23 PM IST
share
Koppal | ಬಸ್ ಹತ್ತುವ ವೇಳೆ ನೂಕುನುಗ್ಗಲು: ಮಹಿಳೆ ಮೃತ್ಯು

ಕೊಪ್ಪಳ: ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಇರಕಲ್ಗಡ ಗ್ರಾಮದ ಯಮನಮ್ಮ ತಾಳಿಕೇರಿ (ಸುಮಾರು 55) ಎಂದು ಗುರುತಿಸಲಾಗಿದೆ.

ಯಮನಮ್ಮ ಅವರು ಮೊಮ್ಮಗನನ್ನು ತಳಕಲ್ ಗ್ರಾಮದ ಎಂಎಂಡಿಆರ್‌ಎಸ್ ಮುರಾರ್ಜಿ ವಸತಿ ಶಾಲೆಗೆ ಬಿಟ್ಟು ಕೊಪ್ಪಳಕ್ಕೆ ಬಂದಿದ್ದರು. ಬಳಿಕ ಸ್ವಗ್ರಾಮ ಇರಕಲ್ಗಡಕ್ಕೆ ತೆರಳಲು ಬಸ್ ಹತ್ತುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬೆಳಿಗ್ಗೆ 10ರಿಂದ 11 ಗಂಟೆಯ ನಡುವೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನಡುವೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಯಮನಮ್ಮ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಯಮನಮ್ಮ ಅವರು ಇರಕಲ್ಗಡ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಹಲವು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮಗನನ್ನು ಕಳೆದುಕೊಂಡಿದ್ದ ಅವರು, ಸೊಸೆ ಹಾಗೂ ಮೊಮ್ಮಗನೊಂದಿಗೆ ವಾಸವಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಗೆ ಬಸ್ ನಿಲ್ದಾಣದ ನಿರ್ವಹಣೆ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.

ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಬಸ್ ಹತ್ತಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿತ್ತು. ಆದರೆ ವ್ಯವಸ್ಥೆಯ ಕೊರತೆಯಿಂದ ನೂಕುನುಗ್ಗಲು ಉಂಟಾಗಿ ದುರ್ಘಟನೆ ಸಂಭವಿಸಿದೆ ಎಂದು ದೂರಿದ್ದಾರೆ.

ಸಂಬಂಧಿಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸ್ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಘಟನೆಯ ನಿಖರ ಕಾರಣ ಪತ್ತೆಹಚ್ಚಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X