GANG RAPE | ಕೊಪ್ಪಳ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಸಾಂದರ್ಭಿಕ ಚಿತ್ರ | PC : freepik.com
ಕೊಪ್ಪಳ: ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಯಲಬುರ್ಗಾ ಪೊಲೀಸ್ ಠಾಣ ವ್ಯಾಪ್ತಿಯ ಮಾದ್ಲೂರು ಗ್ರಾಮದಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಒಳಗಾದ 39 ವರ್ಷದ ಮಹಿಳೆ ಹೊಸಪೇಟೆ ಮೂಲದವರು ಎಂದು ತಿಳಿದು ಬಂದಿದೆ. ಇವರನ್ನು ದುಷ್ಕರ್ಮಿಗಳು ಬೈಕಿನಲ್ಲಿ ಬಲವಂತವಾಗಿ ಕರೆದೊಯ್ದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಲಾಗಿದೆ.
ಸಂತ್ರಸ್ತ ಮಹಿಳೆ ತಮ್ಮ ಪರಿಚಯದವರಿಂದ ಹಣ ಪಡೆಯುವುದಕ್ಕಾಗಿ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದರೆನ್ನಲಾಗಿದೆ. ಈ ವೇಳೆ ಮಹಿಳೆಯನ್ನು ಬೈಕಿನಲ್ಲಿ ಬಲವಂತವಾಗಿ ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಲಾಗಿದೆ. ಸದ್ಯ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story





