ಕೊಪ್ಪಳ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಯುವಕನ ಬಂಧನ

ಕನಕಗಿರಿ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ಯುವಕನೊಬ್ಬ ದೈಹಿಕ ಸಂಪರ್ಕ ಬೆಳೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಚನ್ನಬಸವ ತುಪ್ಪದ (22) ಬಂಧಿತ ಆರೋಪಿ. ಕಳೆದ 5 ತಿಂಗಳ ಹಿಂದೆ ಬಾಲಕಿಗೆ ಪರಿಚಿತನಾದ ಈತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಗಾಗ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ.
ಬಾಲಕಿಗೆ ಎರಡ್ಮೂರು ತಿಂಗಳಿಂದ ಋತುಚಕ್ರವಾಗದಿದ್ದರಿಂದ ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳೀಯ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಯುವಕನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಐ ವಿ. ನಾರಾಯಣ ತಿಳಿಸಿದ್ದಾರೆ.
Next Story




