Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಸಂವಿಧಾನಿಕ ಮೌಲ್ಯ...

Koppal | ಸಂವಿಧಾನಿಕ ಮೌಲ್ಯ ಅಳವಡಿಸಿಕೊಂಡು ಸಮಾಜ ಪರಿವರ್ತನೆಗೆ ಯುವಜನರು ಮುಂದಾಗಲಿ: ನ್ಯಾ.ದರಗದ

ವಾರ್ತಾಭಾರತಿವಾರ್ತಾಭಾರತಿ10 July 2026 10:13 PM IST
share
Koppal | ಸಂವಿಧಾನಿಕ ಮೌಲ್ಯ ಅಳವಡಿಸಿಕೊಂಡು ಸಮಾಜ ಪರಿವರ್ತನೆಗೆ ಯುವಜನರು ಮುಂದಾಗಲಿ: ನ್ಯಾ.ದರಗದ
‘ನಾವು ಮತ್ತು ಸಮಾಜ’ ಯುವಜನರ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರಕ್ಕೆ ಚಾಲನೆ

ಕೊಪ್ಪಳ, ಜು.10: ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜ ಪರಿವರ್ತನೆಗೆ ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ ಹೇಳಿದರು.

ನಗರದ ಕುಷ್ಟಗಿ ರಸ್ತೆಯ ಸಮೂಹ ಸಾಮರ್ಥ್ಯ ಕಟ್ಟಡದ ಸಭಾಂಗಣದಲ್ಲಿ ಇಂಡಿಯನ್ ಸೋಶಿಯಲ್ ಇನ್‌ಸ್ಟಿಟ್ಯೂಟ್ (ಐಎಸ್‌ಐ), ಸಮೂಹ ಸಾಮರ್ಥ್ಯ ಹಾಗೂ ಅಲ್ಫಾ ಫೌಂಡೇಶನ್, ವಿಕಾಸ ಸೇವಾ ಟ್ರಸ್ಟ್, ನೇರಳು ಸಂಸ್ಥೆ ಮತ್ತು ಸಂಭ್ರಮ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮೂರು ದಿನಗಳ ‘ನಾವು ಮತ್ತು ಸಮಾಜ’ ಯುವಜನರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನು ಸಂಘಜೀವಿಯಾಗಿದ್ದು ಸಮಾಜದೊಂದಿಗೆ ಸಾಮರಸ್ಯದಿಂದ ಬದುಕಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹಣ, ಆಸ್ತಿ ಮತ್ತು ಅಧಿಕಾರದ ವ್ಯಾಮೋಹದಿಂದ ಸ್ವಾರ್ಥ ಜೀವನ ಹೆಚ್ಚಾಗುತ್ತಿದ್ದು, ಸಮಾನತೆ ಹಾಗೂ ಭ್ರಾತೃತ್ವದ ಮೌಲ್ಯಗಳು ಕ್ಷೀಣಿಸುತ್ತಿವೆ. ಆಸ್ತಿ, ಹಣ ಮತ್ತು ಸ್ಥಾನಮಾನಕ್ಕಿಂತ ಪ್ರೀತಿ, ವಿಶ್ವಾಸ ಹಾಗೂ ಮಾನವೀಯ ಸಂಬಂಧಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.

ಶಿಕ್ಷಣವು ಕೇವಲ ಅಕ್ಷರಜ್ಞಾನಕ್ಕೆ ಸೀಮಿತವಾಗದೆ, ವಿಜ್ಞಾನ, ಕಾನೂನು, ಸಂವಿಧಾನ ಹಾಗೂ ಸಾಮಾಜಿಕ ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವ ಸಾಧನವಾಗಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ‘ಶಿಕ್ಷಣ, ಸಂಘಟನೆ, ಹೋರಾಟ’ ಸಂದೇಶವನ್ನು ಅಳವಡಿಸಿಕೊಂಡು ಸಮಾಜವನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ತಿಳಿಸಿದರು.

ಉತ್ತಮ ವಿಚಾರಗಳನ್ನು ಒಳಗೊಂಡ ಗ್ರಂಥಗಳನ್ನು ಓದುವ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ನಿರಂತರ ಕಲಿಕೆ ಹಾಗೂ ಸಾಮಾಜಿಕ ಜಾಗೃತಿಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಸದಸ್ಯೆ ಸರೋಜಾ ಬಾಕಳೆ ಮಾತನಾಡಿ, ಶಿಕ್ಷಣಕ್ಕೆ ಸಾಕಷ್ಟು ಅವಕಾಶಗಳಿದ್ದರೂ ಮಕ್ಕಳು ವಿವಿಧ ರೀತಿಯ ಶೋಷಣೆಗೆ ಒಳಗಾಗುತ್ತಿರುವುದು ಆತಂಕಕಾರಿ. ಮಕ್ಕಳ ಹಕ್ಕುಗಳು ಹಾಗೂ ಅವರಿಗೆ ಲಭ್ಯವಿರುವ ಕಾನೂನು ರಕ್ಷಣೆ ಕುರಿತು ಯುವಜನರು ಸಮಗ್ರ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದ ಮೊದಲ ದಿನದ ಅಧಿವೇಶನವನ್ನು ಸಂಪನ್ಮೂಲ ವ್ಯಕ್ತಿ ಧರ್ಮರಾಜ ಗೋನಾಳ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಅಲ್ಫಾ ಫೌಂಡೇಶನ್ ಮುಖ್ಯಸ್ಥೆ ಸಲೀಮಾ ಜಾನ್, ವಿಕಾಸ ಸೇವಾ ಟ್ರಸ್ಟ್ ಅಧ್ಯಕ್ಷ ಸುಭಾನ್ ನೀರಲಗಿ , ಸಂಭ್ರಮ ಸಂಸ್ಥೆಯ ಶಂಕರ್ ಸುರಾಳ , ಐಎಸ್‌ಐ ಸಂಯೋಜಕ ವಸಂತ ಹಾಗೂ ವಿವಿಧ ಭಾಗಗಳ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X