Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ...

ಕೊಪ್ಪಳ | ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು: ಡಿಸಿ ಡಾ.ಸುರೇಶ ಬಿ.ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ8 Sept 2025 7:25 PM IST
share
ಕೊಪ್ಪಳ | ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು: ಡಿಸಿ ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ: ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಗುರುತಿಸಬೇಕು ಹಾಗೂ ಅವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.

ಅವರು ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಮೊದಲನೇ ಹಂತದಲ್ಲಿ ಮಂಜೂರಾಗಿರುವ ಹಾಗೂ ಎರಡನೇ ಹಂತದಲ್ಲಿ ಅನುಮೋದನೆಯಾಗಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 93 ಎಕರೆ 15 ಗುಂಟೆ ಭೂಸ್ವಾಧೀನಪಡಿಸಿಕೊಳ್ಳಲು ಮರು ಪ್ರಸ್ತಾವನೆ ಸಲ್ಲಿಸಿ. ಅಂಜನಾದ್ರಿ ಬೆಟ್ಟದಲ್ಲಿ ಮೊದಲನೇ ಹಂತದಲ್ಲಿ ಮಂಜೂರಾಗಿರುವ ಹಾಗೂ ಎರಡನೇ ಹಂತದಲ್ಲಿ ಅನುಮೋದನೆಯಾಗಿರುವ ಅಂಜನಾದ್ರಿ ಬೆಟ್ಟದ ಮುಂದೆ ಥೀಮ್ ಆಧಾರಿತ ಮೆಟ್ಟಿಲುಗಳ ನಿರ್ಮಾಣ ಮತ್ತು ಬೆಟ್ಟದ ಹಿಂದುಗಡೆ ಥೀಮ್ ಆಧಾರಿತ ಮೆಟ್ಟಿಲುಗಳ ನಿರ್ಮಾಣ ಕಾಮಗಾರಿ, ಪ್ರದಕ್ಷಣಾ ಪಥ ಹಾಗೂ ರೋಪವೇ ಸೇರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅಗತ್ಯವಾಗಿರುವ ಅರಣ್ಯ ಪ್ರದೇಶದ ಜಮೀನಿಗೆ ಸಂಬಂಧಿಸಿದಂತೆ ( Parivesh 2.0 ) ವೆಬ್‌ಸೈಟಿನಲ್ಲಿ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರ ಪಡೆಯುವ ನಿಟ್ಟಿನಲ್ಲಿ ಕಾಮಗಾರಿಗಳಿಗೆ ಅವಶ್ಯವಿರುವ ಒಟ್ಟು 7 ಎಕರೆ ಅರಣ್ಯ ಜಮೀನಿನ ನಿರಾಕ್ಷೇಪಣಾ ಪ್ರಮಾಣ ಪತ್ರ ( NOC ) ಪಡೆಯಲು ಕ್ರಮ ಕೈಗೊಳ್ಳಬೇಕು ಎಂದರು.

ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಮೊದಲನೇ ಹಂತ ಹಾಗೂ ಎರಡನೇ ಹಂತದ ಕಾಮಗಾರಿಗಳು ಹಾಗೂ ರೋಪ್ ವೇ (ಪಿಪಿಪಿ ಮಾದರಿ) ಸೇರಿದಂತೆ ಹೆರಿಟೇಜ್ ಇಂಪ್ಯಾಕ್ಟ್ ಅಸೆಸ್ಮೆಂಟ್ ಸ್ಟಡಿ ( Heritage Impact Assessment Study ) ಅಂತಿಮ ವರದಿಯನ್ನು ತಯಾರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ನಗರದ ಜವಾಹರ್ ರಸ್ತೆಯಲ್ಲಿರುವ ಹಳೆ ಎಸಿ ಕಚೇರಿ ಕಟ್ಟಡದಲ್ಲಿ ವಸ್ತು ಸಂಗ್ರಾಹಾಲಯ ಸ್ಥಾಪಿಸಲು ಹಾಗೂ ಕೊಪ್ಪಳ ಕೋಟೆಯ ಸಮಗ್ರ ಅಭಿವೃದ್ಧಿ ಕುರಿತು ಡಿಪಿಆರ್ ತಯಾರಿಸಬೇಕು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಒಳಪಟ್ಟಿರುವ ಅಶೋಕನ ಶಿಲಾಶಾಸನ (ಗವಿಮಠ ಪರಿಸರ) ಮತ್ತು ಅಶೋಕನ ಪಾಲ್ಕಿಗುಂಡು ಶಿಲಾಶಾಸನ, ಮಳೆಮಲ್ಲೇಶ್ವರ ದೇವಸ್ಥಾನದ ಬೆಟ್ಟದ ಮೇಲಿನ ಪ್ರಾಚೀನದಿನ್ನೆ, ಹಿರೇಬೆಣಕಲ್ ಗ್ರಾಮದ ಮೋರೆರ ಬೆಟ್ಟ ಹಾಗೂ ಇಟಗಿ ಗ್ರಾಮದ ಶ್ರೀ ಮಹಾದೇವ ದೇವಾಲಯ, ಈ 4 ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಅಂದಾಜು ಪಟ್ಟಿ ಸಲ್ಲಿಸಬೇಕು. ಕೊಪ್ಪಳದ ಹುಲಿಕೆರೆಯನ್ನು ಅಭಿವೃದ್ಧಿಪಡಿಸುವ ವಿಸ್ತುತ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸಿ ಸಲ್ಲಿಸಬೇಕು ಎಂದರು.

ಸ್ವದೇಶ್ ದರ್ಶನ್ 2.0 ಯೋಜನೆಯ ಟ್ರಾವೆಲರ್ ನೂಕ್ ರಾಯಲ್ ("Travellers Nook" Royal ) ಕಾಮಗಾರಿಯನ್ನು ಕೈಗೊಳ್ಳಲು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರ್ವೆ ನಂ: 17* ರಲ್ಲಿ 35 ಗುಂಟೆ ಜಮೀನನ್ನು ತರಬೇತಿ ಕೇಂದ್ರ ಹಾಗೂ ವಸತಿ ಉದ್ದೇಶಕ್ಕಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ರವರ ಹೆಸರಿನಲ್ಲಿ ಕಾಯ್ದಿರಿಸಲಾಗಿದ್ದು, ಈ ಜಮೀನನ್ನು ಪ್ರವಾಸೋದ್ಯಮ ಇಲಾಖೆಯ ಹೆಸರಿಗೆ ಹಸ್ತಾಂತರಿಸಬೇಕು. ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ವ್ಯಾಪ್ತಿಯಲ್ಲಿನ 17 ಹಾಗೂ ಕನಕಗಿರಿ ವ್ಯಾಪ್ತಿಯಲ್ಲಿನ 3 ಸೇರಿ ಒಟ್ಟು 20 ಸ್ಮಾರಕಗಳನ್ನು ಗುರುತಿಸಲಾಗಿದ್ದು, ರಾಜ್ಯ ಸಂರಕ್ಷಿತ ಸ್ಮಾರಕಗಳೆಂದು ಘೋಷಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಆಯುಕ್ತರು ನಗರಸಭೆ, ಆಯುಕ್ತರು ನಗರಾಭಿವೃದ್ಧಿ ಪ್ರಾಧಿಕಾರ, ಆಯುಕ್ತರು ಹಂಪಿ ವಿಶ್ವ ಪರಂಪರೆ ನಿರ್ಮಾಣ ಪ್ರಾಧಿಕಾರ, ಕಮಲಾಪುರದಲ್ಲಿರುವ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಡಾ.ಆರ್.ಶೇಜೇಶ್ವರ, ತಹಶಿಲ್ದಾರರು ಗಂಗಾವತಿ, ಸಹಾಯಕ ನಿರ್ದೇಶಕರು ಭೂ ದಾಖಲೆಗಳ ಇಲಾಖೆ ಗಂಗಾವತಿ, ಹೊಸಪೇಟೆಯ ಸೃಷ್ಟಿ ಆರ್ಕಿಟೆಕ್ಟ್ ಶ್ರೀಪಾದ, ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಡಿ.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು ಹಾಗೂ ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X