Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಕ್ಷಯರೋಗ, ಸಾಂಕ್ರಾಮಿಕ,...

ಕೊಪ್ಪಳ | ಕ್ಷಯರೋಗ, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ, ರಸಪ್ರಶ್ನೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Nov 2025 6:35 PM IST
share
ಕೊಪ್ಪಳ | ಕ್ಷಯರೋಗ, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ, ರಸಪ್ರಶ್ನೆ ಕಾರ್ಯಕ್ರಮ

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ಬನ್ನಿಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನ.3 ರಂದು ಕ್ಷಯರೋಗ ನಿರ್ಮೂಲನೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು, ಜಾಗೃತಿ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಅವರು ಮಾತನಾಡಿ, ಕ್ಷಯರೋಗ(ಟಿ.ಬಿ) ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ಸೋಂಕಿತ ವ್ಯಕ್ತಿ ಕೆಮ್ಮಿದಾಗ ಮತ್ತು ಸೀನಿದಾಗ ಬರುವ ತುಂತುರು ಹನಿಗಳಿಂದ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಖ್ಯವಾಗಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹಾಗೂ ಸಹವ್ಯಾಧಿಗಳಿಗೆ ಬೇಗನೆ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಸತತ ಎರಡು ವಾರಗಳಿಂದ ಕೆಮ್ಮು ಕಾಣಿಸಿಕೊಂಡರೆ, ಕೆಮ್ಮಿನಲ್ಲಿ ಕಫ ಬಿದ್ದರೆ, ಕಫದಲ್ಲಿ ರಕ್ತ ಬಂದರೆ, ತೂಕ ಕಡಿಮೆಯಾದರೆ, ಸಾಯಂಕಾಲ ವೇಳೆ ಜ್ವರ ಬರುವ ಲಕ್ಷಣಗಳು ಇದ್ದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರೀಕ್ಷಿಸಿಕೊಂಡು, ರೋಗ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.

ಯಾರೂ ಕೂಡ ಟಿ.ಬಿ ರೋಗದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಕ್ಷಯರೋಗಿಗಳು ಎಲ್ಲಂದರಲ್ಲಿ ಉಗುಳಬಾರದು. ಕೆಮ್ಮುವಾಗ ಮತ್ತು ಸೀನುವಾಗ ಕಡ್ಡಾಯವಾಗಿ ಕರವಸ್ತ್ರ ಬಳಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮನೆಗೆ ಭೇಟಿ ನೀಡಿದಾಗ, ಆರೋಗ್ಯದ ಯಾವುದೇ ಸಮಸ್ಯೆಗಳಿದ್ದರೆ ಅವರ ಹತ್ತಿರ ಚರ್ಚಿಸಿ, ಸಲಹೆ ಪಡೆದುಕೊಳ್ಳಬೇಕು. ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಸೇವಿಸಲು ನಿಕ್ಷಯ್ ಪೋಷಣ್ ಯೋಜನೆ ಅಡಿಯಲ್ಲಿ ಮಾಸಿಕ 1000ರೂ. ಅವರ ಖಾತೆಗೆ ಜಮೆ ಮಾಡಲಾಗುವುದು. ವಿದ್ಯಾರ್ಥಿಗಳು ಕ್ಷಯರೋಗಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ವಾರ್ಡ್ ಗಳಲ್ಲಿ ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಆರೋಗ್ಯವಂತ ಗ್ರಾಮಗಳನ್ನಾಗಿ ಮಾಡಲು ಶ್ರಮಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ರಾಷ್ಟ್ರಿಯ ಆರೋಗ್ಯ ಕಾರ್ಯಕ್ರಮಗಳ ಕುರಿತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ 6 ತಂಡಗಳು ಭಾಗವಹಿಸಿದ್ದು, ಮಹಾಲಕ್ಷ್ಮೀ, ಅಮೃತ ಪ್ರಥಮ(500 ರೂ.), ಅಕ್ಷತಾ, ಗ್ಯಾನೇಶ್ವರಿ ದ್ವಿತೀಯ(300 ರೂ.) ಹಾಗೂ ಶಾಲಿನಿ, ಸುಮಂಗಲ ತೃತೀಯ(200 ರೂ.) ಬಹುಮಾನಗಳನ್ನು ಪಡೆದುಕೊಂಡರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಲಿಂಗೇಶ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾತನಾಡಿದರು.

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾಂತಾ ಮಠದ ಅವರು, ಬಾಲ್ಯವಿವಾಹ ನಿಷೇಧ, ಆರ್.ಸಿ.ಹೆಚ್, ಕುಟುಂಬ ಕಲ್ಯಾಣ ಹಾಗೂ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಕಾಂತ, ಕಾಲೇಜಿನ ಸಹಉಪನ್ಯಾಸಕ ವರ್ಗದವರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X