Koppala : ಗಂಗಾನಾಳ ಬಳಿ ಹೊಲಕ್ಕೆ ನುಗ್ಗಿದ ಬಸ್; ತಪ್ಪಿದ ದೊಡ್ಡ ದುರಂತ

ಕೊಪ್ಪಳ : ಕನಕಗಿರಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್, ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನೆಟ್ ಕಿತ್ತುಹೋದ ಕಾರಣ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿರುವ ಘಟನೆ ಗುರುವಾರ ಬೆಳಗ್ಗೆ ಸುಮಾರು 6 ಗಂಟೆಗೆ ಗಂಗಾನಾಳ ಹತ್ತಿರ ನಡೆದಿದೆ.
ಬಸ್‌ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.
ಬಸ್ ಗಂಗಾನಾಳ ಬಳಿ ಬರುತ್ತಿದ್ದಂತೆ ಏಕಾಏಕಿ ಮುಂಭಾಗದ ಚಕ್ರದ ಪಟ್ಟಿಯ ನೆಟ್ ಬಿದ್ದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ ನುಗ್ಗಿದೆ. ಬಸ್ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಸ್ಥಳಕ್ಕೆ ಧಾವಿಸಿ, ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಹೊರ ತಂದಿದ್ದಾರೆ.
ಬಸ್ ಚಾಲಕನ ಸಮಯಪ್ರಜ್ಞೆಯಿಂದಲೇ ದೊಡ್ಡ ದುರಂತ ತಪ್ಪಿದೆ ಎಂದು ಪ್ರಯಾಣಿಕರು ಹೇಳಿದ್ದಾರೆ.




