Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಊಟದಲ್ಲಿ ಜಿರಳೆ ಪತ್ತೆ ಆರೋಪ:...

ಕೊಪ್ಪಳ | ಊಟದಲ್ಲಿ ಜಿರಳೆ ಪತ್ತೆ ಆರೋಪ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 March 2026 11:44 PM IST
share
ಕೊಪ್ಪಳ | ಊಟದಲ್ಲಿ ಜಿರಳೆ ಪತ್ತೆ ಆರೋಪ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳ: ರಾತ್ರಿಯ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಆರೋಪಿಸಿ ಎಸ್‌ಸಿ–3 ಹಾಸ್ಟಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಈ ವೇಳೆ ಎಸ್‌ಸಿ–3 ಹಾಸ್ಟಲ್‌ನಲ್ಲಿನ ಅವ್ಯವಸ್ಥೆ ಹಾಗೂ ವಾರ್ಡನ್ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿ ವರ್ತನೆ ಕುರಿತು ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡದಿರುವುದು, ಕೊಳೆತ ತರಕಾರಿಯಿಂದ ಅಡುಗೆ ತಯಾರಿಸುವುದು, ಸರಿಯಾಗಿ ಬೇಯದ ಊಟ ಬಡಿಸುವುದು ಸೇರಿದಂತೆ ಹಲವು ಸಮಸ್ಯೆಗಳು ಇರುವುದಾಗಿ ಅವರು ಆರೋಪಿಸಿದರು. ಈ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಯಾರಾದರೂ ಸಮಸ್ಯೆಗಳ ಬಗ್ಗೆ ಮಾತನಾಡಿದರೆ “ನಿಮ್ಮ ಫೈಲ್ ತೆಗೆದುಕೊಂಡು ಬನ್ನಿ, ಹಾಸ್ಟಲ್‌ನಿಂದ ಅಮಾನತು ಮಾಡುತ್ತೇನೆ” ಎಂದು ಬೆದರಿಕೆ ಹಾಕಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು.

ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾತನಾಡಿ, ವಾರ್ಡನ್‌ಗಳ ಕೊರತೆ ಇರುವುದರಿಂದ ಸಮಸ್ಯೆಗಳು ಉಂಟಾಗಿವೆ. ಸಾಧ್ಯವಾದಷ್ಟು ಉತ್ತಮ ಅಡುಗೆ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇವೆ. ಸಾಧ್ಯವಾಗದಿದ್ದರೆ ನಿಮಗೆ ದೊರೆಯಬೇಕಾದ ಹಣವನ್ನು ನೀಡುತ್ತೇವೆ ಎಂದು ಹೇಳಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ವಾರ್ಡನ್ ಬಸವರಾಜ ಅವರನ್ನು ವರ್ಗಾವಣೆ ಮಾಡಬೇಕು ಹಾಗೂ ಹಾಸ್ಟಲ್‌ನಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪ ನಿರ್ದೇಶಕರು “ತಮಗೆ ಬೇಕಾದ್ದು ಮಾಡಿಕೊಳ್ಳಿ” ಎಂದು ಹೇಳಿದರೆಂದು ಆರೋಪಿಸಿದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಧರಣಿಗೆ ಮುಂದಾದರು.

ವಿದ್ಯಾರ್ಥಿಗಳ ಆಕ್ರೋಶ ಹೆಚ್ಚುತ್ತಿದ್ದಂತೆ ಉಪ ನಿರ್ದೇಶಕ ಅಜ್ಜಪ್ಪ ಸೋಲಗಾಡ ಅವರು ಸ್ಥಳದಿಂದ ತೆರಳಿದರು. ಆದರೂ ವಿದ್ಯಾರ್ಥಿಗಳು ಧರಣಿಯನ್ನು ಮುಂದುವರಿಸಿದರು.

ಎಸಿ ಮಹೇಶ್ ಮಾಲಗಿತ್ತಿ ಅವರು ಪ್ರತಿಭಟನಾ ಸ್ಥಳಕ್ಕೆ ಬಂದು ಬೆಳ್ಳಿಗೆ ನಿಮ್ಮ ಸಮಸ್ಯೆ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈ ಬಿಟ್ಟರು.

Tags

proteststudenthostelKoppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X