Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಜಿಲ್ಲೆಯಲ್ಲಿ ಸಮೀಕ್ಷಾ...

ಕೊಪ್ಪಳ | ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ : ಡಿಸಿ ಡಾ.ಸುರೇಶ ಬಿ.ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ3 Sept 2025 5:18 PM IST
share
ಕೊಪ್ಪಳ | ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ : ಡಿಸಿ ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥತಿಗತಿಗಳ ಬಗ್ಗೆ ಕೈಗೊಳ್ಳಲಿರುವ ಸಮೀಕ್ಷಾ ಕಾರ್ಯವನ್ನು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಕೈಗೊಳ್ಳಲಿರುವ ಸಮೀಕ್ಷಾ ಕಾರ್ಯದ ಕುರಿತು ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಮೀಕ್ಷೆ ಕಾರ್ಯವು ಕೊಪ್ಪಳ ‌ಜಿಲ್ಲೆಯಲ್ಲಿ ಸೆ.20 ರಿಂದ ಅ.7 ರವರೆಗೆ ನಡೆಯಲಿದ್ದು, ಯಾವುದೇ ಸಮಸ್ಯೆಗಳಾಗದಂತೆ ನಡೆಸಬೇಕು. ಜಿಲ್ಲೆಯ ಆಯಾ ತಾಲ್ಲೂಕಿನ ತಹಶೀಲ್ದಾರರು ಸಮೀಕ್ಷೆ ‌ಕಾರ್ಯಕ್ಕೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರನ್ನು ಸರಿಯಾಗಿ ನೇಮಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲನೆ ಮಾಡಬೇಕು. ಶಿಕ್ಷಕರು ವರ್ಗಾವಣೆ ಯಾದವರು, ಡೆಪಟೇಷನ್ ಮೇಲೆ ಬೇರೆ ಕಡೆ ಹೋದವರು ಇರುತ್ತಾರೆ. ಹಾಗಾಗಿ ಈ ಎಲ್ಲವುಗಳನ್ನು ಗಮನಿಸಿ ಗಣತಿದಾರರ ಸಮೀಕ್ಷಾ‌ ಪಟ್ಟಿ ತಯಾರಿಸಬೇಕೆಂದರು.

ಆರೋಗ್ಯ ‌ಸಮಸ್ಯೆ ಇರುವವರು, ಚಿಕ್ಕ ಮಕ್ಕಳು ಇರುವ ಮಹಿಳಾ ಶಿಕ್ಷಕರು ಮತ್ತು ವಿಶೇಷ ಚೇತನ ಶಿಕ್ಷಕರಿಗೆ ಈ ಕಾರ್ಯಕ್ಕೆ ನಿಯೋಜನೆ‌ ಮಾಡಬೇಡಿ. ಸಮೀಕ್ಷಾ ಕಾರ್ಯಕ್ಕೆ‌‌ ಪ್ರತಿ 150 ಮನೆಗಳಿಗೆ ಒಬ್ಬ ಗಣತೀದಾರರನ್ನು ಹಾಗೂ‌ 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಿಸಿ ಗಣತಿ ಕಾರ್ಯಕ್ಕೆ ಯಾವುದೇ ಸಮಸ್ಯೆಗಳಾಗದಂತೆ ಅಗತ್ಯ ಸಿದ್ಧತೆಗಳನ್ನು ‌ಮಾಡಿಕೊಳ್ಳಬೇಕು ಎಂದು ಹೇಳಿದರು.

ಕೊಪ್ಪಳ ‌ಜಿಲ್ಲೆಯಲ್ಲಿ 3,55,361 ಕುಟುಂಬಗಳನ್ನು ಅಂದಾಜಿಸಲಾಗಿದ್ದು, 150 ಕುಟುಂಬಕ್ಕೆ ‌ಒಬ್ಬ ಗಣತಿದಾರರಂತೆ ಒಟ್ಟು 2,370 ಗಣತಿದಾರರು ಬೇಕಾಗುತ್ತಾರೆ. 20 ಗಣತಿದಾರರಿಗೆ ಒಬ್ಬ ‌ಮೇಲ್ವಿಚಾರಕರಂತೆ ಅಂದಾಜು ‌130 ಜನ ಮೇಲ್ವಿಚಾರಕರು ಮತ್ತು 50 ಮಾಸ್ಟರ್ ಟ್ರೈನರಗಳನ್ನು ನೇಮಿಸಬೇಕು. ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಬೇಕು. ಆಯಾ ಗ್ರಾಮ ಪಂಚಾಯತ್‌ ‌ಮತ್ತು ನಗರ ವ್ಯಾಪ್ತಿಯ ಪ್ರದೇಶದಲ್ಲಿ ಅವಶ್ಯವಿರುವಷ್ಟು ಶಿಕ್ಷಕರು ಲಭ್ಯವಾಗದಿದ್ದಲ್ಲಿ ಇತರೆ ವಿವಿಧ ಇಲಾಖೆಯ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರನ್ನು ನೇಮಿಸಿ. ಈ ಸಮೀಕ್ಷೆ ‌ಕಾರ್ಯಕ್ಕೆ ಮಾಸ್ಟರ್ ಟ್ರೈನರ್‌ ಗಳ ಅವಶ್ಯಕತೆ ಇದ್ದು, ಈಗಾಗಲೇ ಈ ಕಾರ್ಯದಲ್ಲಿ ಕೆಲಸ ಮಾಡಿದವರನ್ನು ನೇಮಿಸಿ ಎಂದು ಹೇಳಿದರು.

ಸಭೆಯಲ್ಲಿ ಅಪರ‌ ಜಿಲ್ಲಾಧಿಕಾರಿ ‌ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ, ಜಿಲ್ಲಾ ‌ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಾಗಮಣಿ ಹೊಸಮನಿ, ಜಿಲ್ಲಾ ‌ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ್ ಮಾನೆ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಜಗದೀಶ್, ಜಿಲ್ಲಾ ‌ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿ ಅಜ್ಮಿರ್ ಅಲಿ ಹಾಗೂ ‌ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶಿಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X