ಕೊಪ್ಪಳ | ಪ್ರೇಮ ಪ್ರಕರಣ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಕೊಪ್ಪಳ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಮೃತರನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ.
ಕೊಪ್ಪಳ ನಗರದ ನಿವಾಸಿಯಾದ ಗವಿಸಿದ್ದಪ್ಪ ಎಂಬವರನ್ನು ಮೂವರು ಯುವಕರು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್ ಬಂಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಮೂವರು ಆರೋಪಿಗಳು ಈ ಕೃತ್ಯ ಮಾಡಿದ್ದು, ಇವರಲ್ಲಿ ಸಾಧಿಕ್ ಎನ್ನುವ ಆರೋಪಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಆಗಮಿಸಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನು ತಿಳಿದು ಬರಬೇಕಿದೆ.
Next Story





