Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಅಪ್ರಾಪ್ತ ಬಾಲಕಿಯ ಅಪಹರಣ,...

ಕೊಪ್ಪಳ | ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ10 Sept 2025 6:00 PM IST
share
ಕೊಪ್ಪಳ | ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಶಿಕ್ಷೆ

ಕೊಪ್ಪಳ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ)ದ ನ್ಯಾ.ಕುಮಾರ ಡಿ.ಕೆ. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ.ಗಳ ದಂಡವನ್ನು ವಿಧಿಸಿ ಶಿಕ್ಷೆ ಪ್ರಕಟಿಸಿದೆ.

ಕೊಪ್ಪಳ ನಗರದ ಶಿವಾನಂದ ಕಡಿ ಎಂಬ ವ್ಯಕ್ತಿಯು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಬಾಲಕಿಯ ತಂದೆ ಬಳಿ ಕೇಳಿದ್ದನು. ಆದರೆ ತಮ್ಮ ಮಗಳಿಗೆ ಇನ್ನೂ ಮದುವೆ ವಯಸ್ಸು ಆಗಿಲ್ಲ ಎಂದು ಬಾಲಕಿಯ ತಂದೆ ಮದುವೆಗೆ ಒಪ್ಪಿರಲಿಲ್ಲ. ಬಾಲಕಿಯು ದಿನಾಂಕ:17-02-2022 ರಂದು ಬೆಳಿಗ್ಗೆ ಕೊಪ್ಪಳದ ಬಾಲಕಿಯರ ಪದವಿ ಪೂರ್ವ ಕಾಲೇಜು ಗೇಟಿನ ಬಳಿ ಬಂದಾಗ ಆರೋಪಿಯು ಮದುವೆಯಾಗೋಣ ಎಂದು ಬಲವಂತವಾಗಿ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಜೀವರ್ಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಿ, ತಾವಿಬ್ಬರೂ ಮದುವೆಯಾಗಿದ್ದು, ಸ್ವಲ್ಪ ದಿನ ಇಲ್ಲಿಯೇ ಇದ್ದು, ಕೆಲಸ ಸಿಕ್ಕ ನಂತರ ಹೋಗುವುದಾಗಿ ಸುಳ್ಳು ಹೇಳಿ ಆ ಮನೆಯಲ್ಲಿ ಬಾಲಕಿಯೊಂದಿಗೆ ವಾಸವಿದ್ದನು. ಈ ಸಂದರ್ಭ ಬಾಲಕಿಯ ವಿರೋಧದ ನಡುವೆಯೂ ಹಲವಾರು ಬಾರಿ ಆಕೆಯ ಮೇಲೆ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದನು.

ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಆರೋಪಿಯ ವಿರುದ್ದ ಕೊಪ್ಪಳದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಠಾಣೆಯ ಮುಖ್ಯಪೇದೆ ಶರಣಪ್ಪ ಪ್ರಥಮ ಹಂತದ ತನಿಖೆ ಮಾಡಿದ್ದರು. ಪಿಎಸ್‌ಐ ಯಲ್ಲಪ್ಪ ಹಾಗೂ ಪಿಐ ಸಿ.ಬಿ.ಚಿಕ್ಕೋಡಿ ಅವರು ಮುಂದಿನ ತನಿಖೆಯನ್ನು ನಿರ್ವಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಠಾಣೆಯ ಸಿಬ್ಬಂದಿ ಹನುಮಮತಗೌಡ ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸಿದ್ದರು.

ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೋ) ಸಂ: 18/2022 ರಲ್ಲಿ ದಾಖಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯ ಮೇಲೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಎಂದು ನಿರ್ಣಯಿಸಿ, ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂ.ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಸೆ.8 ರಂದು ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ (ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು. ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕಾಶ ಹಾಗೂ ಬಾಳಪ್ಪ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X