Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಹೊಸ ಏಕಲವ್ಯ ಮಾದರಿ ಶಾಲೆ ಮಂಜೂರಿಗೆ...

ಹೊಸ ಏಕಲವ್ಯ ಮಾದರಿ ಶಾಲೆ ಮಂಜೂರಿಗೆ ಅರ್ಹತಾ ಮಾನದಂಡ ಸಡಿಲಿಕೆ ಮಾಡಿ: ಸಂಸದ ಜಿ.ಕುಮಾರ ನಾಯಕ ಮನವಿ

ವಾರ್ತಾಭಾರತಿವಾರ್ತಾಭಾರತಿ17 Nov 2025 5:08 PM IST
share
ಹೊಸ ಏಕಲವ್ಯ ಮಾದರಿ ಶಾಲೆ ಮಂಜೂರಿಗೆ ಅರ್ಹತಾ ಮಾನದಂಡ ಸಡಿಲಿಕೆ ಮಾಡಿ: ಸಂಸದ ಜಿ.ಕುಮಾರ ನಾಯಕ ಮನವಿ

ಕೊಪ್ಪಳ : ಹೊಸ ಏಕಲವ್ಯ ಮಾದರಿ ವಸತಿ ಶಾಲೆ(ಇ.ಎಂ.ಆರ್.ಎ) ಸ್ಥಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಕೇಂದ್ರ ಬುಡಕಟ್ಟು ವ್ಯವಹಾರ ಸಚಿವಾಲ ಕಾರ್ಯದರ್ಶಿಗಳಾದ ವಿಭು ನಾಯರ್ ಅವರಿಗೆ ಮನವಿ ಮಾಡಿದ್ದಾರೆ.

ಅವರು ಅ.18ರಂದು ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರಿಗೆ ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರಿಗೆ ಅರ್ಹತಾ ಮಾನದಂಡ ಸಡಿಲಿಕೆಗೆ ಬುಡಕಟ್ಟು ವ್ಯವಹಾರ ಇಲಾಖೆಯ ಅಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಸಹ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಭಾರತದ ಗೃಹ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ರಂಜನಾ ಚೋಪ್ರಾ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರರಾದ ಜಿ.ಕುಮಾರ ನಾಯಕ ಅವರ ಮನವಿಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ ಹಾಗೂ ಕರ್ನಾಟಕದಲ್ಲಿ ಹೊಸ ಏಕಲವ್ಯ ಮಾದರಿ ವಸತಿ ಸ್ಥಾಪನೆಗಾಗಿ ತಕ್ಷಣವೇ ಮಾರ್ಗಸೂಚಿಗಳಲ್ಲಿ ಸಡಿಲಿಕೆ ನೀಡುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡುವುದಾಗಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ 20,000 ಕ್ಕಿಂತ ಹೆಚ್ಚು ಎಸ್ಟಿ ಸಮುದಾಯದ ಜನಸಂಖ್ಯೆ ಹೊಂದಿರುವ 68 ಬ್ಲಾಕ್‌ಗಳಿವೆ. ಆದರೆ ಇವು ಹೊಸದಾಗಿ ಪರಿಷ್ಕರಿಸಲಾದ ಮಾರ್ಗಸೂಚಿಗಳನ್ನು ಪೂರೈಸುವುದಿಲ್ಲ. ಇದರಿಂದಾಗಿ ಈ ಸಮುದಾಯಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವುದರಿಂದ ವಂಚಿತರಾಗುತ್ತಿವೆ. 2011ರ ಜನಗಣತಿಯ ಪ್ರಕಾರ, ರಾಜ್ಯದ ಐದು ಭೌಗೋಳಿಕ ವಲಯಗಳಾದ 22 ಜಿಲ್ಲೆಗಳು ಮತ್ತು 70 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಟಿ ಜನಸಾಂದ್ರತೆ ಹೆಚ್ಚಿನ ಪ್ರಮಾಣದಲ್ಲಿದೆ. ಈ ಸಮುದಾಯ ಮತ್ತು ಇತರ ಅತ್ಯಂತ ಹಿಂದುಳಿದ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿ ಸುಧಾರಣೆಯಾಗದೆ ಕರ್ನಾಟಕ ತನ್ನ ನಿಜವಾದ ಸಾಮರ್ಥ್ಯವನ್ನು ಸಾಧಿಸಲು ಸಾಧ್ಯವಿಲ್ಲ. ಮಾರ್ಗಸೂಚಿಗಳ ಸಡಿಲಿಕೆ ಮೂಲಕ ಕರ್ನಾಟಕದ ಹೆಚ್ಚಿನ ಎಸ್ಟಿ ಸಮುದಾಯದ ವಿದ್ಯಾರ್ಥಿಗಳು ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮುಖಾಂತರ ಗುಣಮಟ್ಟದ, ಸಮಗ್ರ ಶಿಕ್ಷಣವನ್ನು ಪಡೆಯಲು ಅವಕಾಶ ಸಿಗುತ್ತದೆ. ನಿಯಮ ಬದಲಾವಣೆ ಅತೀ ತುರ್ತು ಮತ್ತು ಅಗತ್ಯವಾದ ವಿಷಯವಾಗಿದೆ ಎಂದು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X