Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಕುರಿಗಾರರಿಗೆ ಸರಕಾರದ ಯೋಜನೆಗಳ...

ಕೊಪ್ಪಳ | ಕುರಿಗಾರರಿಗೆ ಸರಕಾರದ ಯೋಜನೆಗಳ ಸೌಲಭ್ಯ ತಲುಪಿಸಿ : ಸಿಇಓ ರಾಹುಲ್ ರತ್ನಂ ಪಾಂಡೇಯ

ವಾರ್ತಾಭಾರತಿವಾರ್ತಾಭಾರತಿ24 Dec 2024 9:42 PM IST
share
Photo of Metting

ಕೊಪ್ಪಳ : ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಲು ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.

ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಕುರಿಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

ಕುರಿ-ಮೇಕೆ ಸಾಕಾಣಿಕೆಗೆ ಮತ್ತು ಕುರಿಗಾರರಿಗೆ ಸರ್ಕಾರವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ, ಸಹಾಯಧನ ಸೌಲಭ್ಯ, ಅಗತ್ಯ ಪರಿಕರಗಳ ವಿತರಣೆ ಮತ್ತು ಜಾನುವಾರುಗಳಿಗೆ ಲಸಿಕೆ ಹೀಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಕುರಿಗಾರರಿಗೆ ಜಾಗೃತಿ ಮೂಡಿಸಬೇಕು. ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಪ್ರಮಾಣ ಶೇ.100 ರಷ್ಟಾಗಬೇಕು ಮತ್ತು ಸೌಲಭ್ಯ ವಿತರಣೆಯಲ್ಲೂ ಜಿಲ್ಲೆಯ ಪ್ರಗತಿ ಹೆಚ್ಚಾಗಬೇಕು. ಬಹಳಷ್ಟು ಕುರಿಗಾರರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಹೇಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂಬುವುದು ತಿಳಿದಿರುವುದಿಲ್ಲ ಎಂದರು.

ಗಂಗಾವತಿಯ ಹಿಮಾಲಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಬಿ ಜೂಡಿ ಮಾತನಾಡಿ, ಮಾರುಕಟ್ಟೆಯಲ್ಲಿ ಕುರಿಗಳನ್ನು ಮಾರಾಟ ಮಾಡಲು ವಾರದಲ್ಲಿ ಒಮ್ಮೆ ಪ್ರತಿ ಶುಕ್ರವಾರದಂದು ಕುಕನಪಳ್ಳಿಯಲ್ಲಿ ಸಂತೆ ನಡೆಯುತ್ತದೆ. ಇದರೆ ಜೊತೆಗೆ ಡಿಜಿಟಲ್ ಮಾರುಕಟ್ಟೆ ಅತ್ಯವಶ್ಯಕವಾಗಿದ್ದು, ಗಂಗಾವತಿ ಮಾರುಕಟ್ಟೆ ಸಮಿತಿಯಲ್ಲಿ ಡಿಜಿಟಲ್ ತೂಕದ ಯಂತ್ರವನ್ನು ಅಳವಡಿಸಬೇಕು ಎಂದರು.

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ ಪಿ.ಎಂ ಮಲ್ಲಯ್ಯ ಅವರು ಮಾತನಾಡಿ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಸಾಲ ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು, 2025ರ ಮಾರ್ಚ್ 31ರವರೆಗೆ ಆವಕಾಶವಿರುತ್ತದೆ. ಆಸಕ್ತ ಕುರಿಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಡಾ ಆನಂದ ದೇವರನಾವದಗಿ ಮಾತನಾಡಿ, ಕುರಿ ಹಾಗೂ ಮೇಕೆಗಳಿಗೆ ಔಷಧಿಗಳ ವಿತರಣೆಗಾಗಿ ಕೇಂದ್ರ ಕಚೇರಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದ್ದು, ಸರಬರಾಜು ಆದ ತಕ್ಷಣ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳದ ಜೈ ಭೀಮ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಮಹಾಲಕ್ಷ್ಮೀ ಲಕ್ಷ್ಮಣ ಕಂದಾರಿ ಮಾತನಾಡಿದರು.

ಸಭೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ವಿನೋದ ಕುಮಾರ ದಿವಟರ, ಡಾ.ಶಿವರಾಜ ಎಂ.ಶೆಟ್ಟರ, ಡಾ.ಚನ್ನಬಸಪ್ಪ ಹಳ್ಳದ, ಡಾ.ಪ್ರಕಾಶ ಚೂರಿ, ಡಾ.ಜಾಕೀರ ಹುಸೇನ್, ಕುರಿಗಾರರಾದ ಮುಕ್ಕುಂದಪ್ಪ ಅಳವಂಡಿ, ಮಹಾಂತಪ್ಪ ಹನವಾಳ ಸೇರಿದಂತೆ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X