ಕೊಪ್ಪಳ | ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಆರೋಪ : ಐವರ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ : ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಮಾಡಿರುವ ಘಟನೆಯು ಕೊಪ್ಪಳ ಜಿಲ್ಲೆಯ ಕಾರಟಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಸಿದ್ಧಾಪುರ ಗ್ರಾಮದ ರೌಡಿಶೀಟರ್ ಪೆಂಡಾಲ್ ಮಹೀಬೂಬ್ (ಎಂ.ಡಿ.ಎಸ್) ಸೇರಿ ಒಟ್ಟು 5 ಜನರ ವಿರುದ್ದ ಪ್ರಕರಣ ದಾಖಲಾಗಿದೆ.
ಸಿದ್ಧಾಪುರ ಗ್ರಾಮದ ಐದನೇ ವಾರ್ಡಿನ ನಿವಾಸಿಯಾದ ದಲಿತ ಮಹಿಳೆಯ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊರ್ವರು ನೀಡಿರುವ ದೂರಿನ ಆಧಾರದ ಮೇಲೆ ಕಾರಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯು ಗಂಗಾವತಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಯಾವುದೇ ಆರೋಪಿಯ ಬಂಧನವಾಗಿಲ್ಲ ಎಂದು ತಿಳಿದು ಬಂದಿದೆ.
Next Story