Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಬಲ್ದೋಟ ಕಾರ್ಖಾನೆ ಸ್ಥಾಪನೆ...

ಕೊಪ್ಪಳ | ಬಲ್ದೋಟ ಕಾರ್ಖಾನೆ ಸ್ಥಾಪನೆ ರದ್ದು ಮಾಡಲು ರಾಜ್ಯ ಸರಕಾರಕ್ಕೆ ಸಾಧ್ಯ: ಸಿ.ವಿ.ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ2 Nov 2025 6:25 PM IST
share
ಕೊಪ್ಪಳ | ಬಲ್ದೋಟ ಕಾರ್ಖಾನೆ ಸ್ಥಾಪನೆ ರದ್ದು ಮಾಡಲು ರಾಜ್ಯ ಸರಕಾರಕ್ಕೆ ಸಾಧ್ಯ: ಸಿ.ವಿ.ಚಂದ್ರಶೇಖರ್

ಕೊಪ್ಪಳ: ಕೊಪ್ಪಳದ ಶಾಸಕರು ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮನಸ್ಸು ಮಾಡಿದರೆ ಉದ್ದೇಶಿತ ಬಲ್ದೋಟ ಕಾರ್ಖಾನೆ ಸ್ಥಾಪನೆಯನ್ನು ರದ್ದು ಮಾಡಲು ಸಾಧ್ಯವಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯರಾದ ಸಿ.ವಿ.ಚಂದ್ರಶೇಖರ್ ಹೇಳಿದರು.

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ (ಜಂಟಿ ಕ್ರಿಯಾ ವೇದಿಕೆ) ಪರಿಸರ ಹಿತರಕ್ಷಣಾ ವೇದಿಕೆ, ಕೊಪ್ಪಳ, ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ರವಿವಾರ ಮಾತನಾಡಿದರು.

ಜೆಡಿಎಸ್ ಪಕ್ಷದ ಮುಖಂಡರ ನಿಯೋಗದೊಂದಿಗೆ ಮುಷ್ಕರ ನಿರತ ಸಮಿತಿಯ ಸದಸ್ಯರನ್ನು ಭೇಟಿ ಮಾಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

"ನಾನು ರಾಜಕೀಯ ಮಾಡುತ್ತಿಲ್ಲ. ಒಬ್ಬ ಸಾಮಾನ್ಯ ಪ್ರಜೆಯಾಗಿ ಮಾತನಾಡುತ್ತಿದ್ದೇನೆ. ಪರಿಸರ ಸಂಬಂಧಿತ ವಿಷಯಗಳ ಅನುಮೋದನೆಯನ್ನು ಹೊರತುಪಡಿಸಿದರೆ ಕಾರ್ಖಾನೆ ಸ್ಥಾಪನೆ ವಿಚಾರದಲ್ಲಿ ಕೇಂದ್ರ ಸರಕಾರದ ಪಾತ್ರವಿಲ್ಲ. ಯಾವುದೇ ಕಾರ್ಖಾನೆಯನ್ನು ಆರಂಭಿಸುವ ಅಥವಾ ರದ್ದುಪಡಿಸುವ ಅಧಿಕಾರ ಸಂಪೂರ್ಣವಾಗಿ ರಾಜ್ಯ ಸರಕಾರಕ್ಕೆ ಸೇರಿದ್ದು. ಹೀಗಾಗಿ ಇಲ್ಲಿನ ಶಾಸಕರು, ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮನಸು ಮಾಡಿದರೆ ಮುಖ್ಯಮಂತ್ರಿ ಅವರ ಮೇಲೆ ಮೇಲೆ ಒತ್ತಡ ಹೇರಿ ಕಾರ್ಖಾನೆ ಸ್ಥಾಪನೆಯನ್ನು ರದ್ದುಗೊಳಿಸಲು ಸಾಧ್ಯವಿದೆ. ಕಾಂಗ್ರೆಸ್ ಜನ ಪ್ರತಿನಿಧಿಗಳು ಈ ಕೆಲಸ ಮಾಡಿದರೆ ಅವರ ಮನೆಯ ತನಕ ನಾನು ದೀರ್ಘದಂಡ ನಮಸ್ಕಾರ ಹಾಕಿ ಅವರನ್ನು ಸನ್ಮಾನಿಸುತ್ತೇನೆ ಎಂದು ಹೇಳಿದರು.

ಇತ್ತೀಚೆಗೆ ಮುಖ್ಯಮಂತ್ರಿಯವರು ಕೊಪ್ಪಳಕ್ಕೆ ಬಂದಾಗ ನೈಜ ಹೋರಾಟಗಾರರನ್ನು ಪೊಲೀಸರ ಮೂಲಕ ಸ್ಥಳಾಂತರಿಸಲಾಯಿತು. ಬಾಡಿಗೆ ಹೋರಾಟಗಾರರನ್ನು ಕರೆತಂದು ಕೊಪ್ಪಳಕ್ಕೆ ಕಾರ್ಖಾನೆ ಬೇಕು ಎಂಬ ಬೇಡಿಕೆಯನ್ನು ಸಿದ್ದರಾಮಯ್ಯನವರ ಮುಂದೆ ಇರಿಸಲಾಯಿತು. ಕಳೆದ 30 ವರ್ಷಗಳಲ್ಲಿ ಕೊಪ್ಪಳದ ಪರಿಸರವನ್ನು ಹಾಳು ಮಾಡಿದ್ದು, ಇಲ್ಲಿ ಅಧಿಕಾರ ಅನುಭವಿಸಿದ ಜನಪ್ರತಿನಿಧಿಗಳು ಎಂದು ಟೀಕಿಸಿದರು.

"ನಮಗೆ ಕಾರ್ಖಾನೆಗಳು ನೀಡುವ ಉದ್ಯೋಗ ಬೇಕಿಲ್ಲ. ನಮಗೆ ಬೇಕಿರುವುದು ಶುದ್ಧವಾದ ಗಾಳಿ, ನೀರು ಹಾಗೂ ಮಣ್ಣು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಪಾಲ್ಗೊಂಡು ಇದನ್ನು ತಾರ್ಕಿಕಂ ಅಂತ್ಯಕ್ಕೆ ಕೊಂಡಯ್ಯಬೇಕು," ಎಂದು ಜೆಡಿಎಸ್ ಜಿಲ್ಲಾ ವಕ್ತಾರರಾದ ಮಲ್ಲನಗೌಡ ಕೋನನಗೌಡ್ರು ಹೇಳಿದರು.

ಒಬಿಸಿ ಘಟಕದ ಜಿಲ್ಲಾಧ್ಯಕ್ಷರಾದ ಕರಿಯಪ್ಪ ಹಾಲವರ್ತಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷರಾದ ಮಂಜುನಾಥ್ ಸೊರಟೂರ್, ಜೆಡಿಎಸ್ ಜಿಲ್ಲಾ ಚುನಾವಣೆ ಅಧಿಕಾರಿ ಶಿವಕುಮಾರ್ ಏಣಿಗಿ, ನಗರ ಅಧ್ಯಕ್ಷರಾದ ಸೋಮನಗೌಡ ಹೊಗರನಾಳ, ಮಹಿಳಾ ನಗರ ಘಟಕದ ಅಧ್ಯಕ್ಷರಾದ ನಿರ್ಮಲಾ ಮೇದಾರ, ನಗರ ಘಟಕದ ಉಪಾಧ್ಯಕ್ಷರಾದ ಮಾರುತಿಗೌಡ ಪೋಲೀಸ್ ಪಾಟೀಲ್, ತಾಲೂಕು ಘಟಕದಮುಖಂಡರಾದ ಸುರೇಶ ದದೇಗಲ್, ನಗರ ಘಟಕದ ಮುಖಂಡ ರಂಗಪ್ಪ ಬೋವಿ‌ ಹಾಗೂ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X