Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ರಾಜ್ಯ ಮಟ್ಟದ ಖಾದಿ...

ಕೊಪ್ಪಳ | ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ, ಮಾರಾಟ ಮೇಳಕ್ಕೆ ತೆರೆ: 1.50 ಕೋಟಿ ರೂ. ವಹಿವಾಟು

ವಾರ್ತಾಭಾರತಿವಾರ್ತಾಭಾರತಿ3 Sept 2025 6:21 PM IST
share
ಕೊಪ್ಪಳ | ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ, ಮಾರಾಟ ಮೇಳಕ್ಕೆ ತೆರೆ: 1.50 ಕೋಟಿ ರೂ. ವಹಿವಾಟು

ಕೊಪ್ಪಳ, ಸೆ.3: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹತ್ತು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ದೊರೆತಿದ್ದು, 1.50 ಕೋಟಿ ರೂ. ವಹಿವಾಟು ಮೂಲಕ ಖಾದಿ ಉತ್ಸವವು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ, ಬೆಂಗಳೂರು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ಸಹಯೋಗದೊಂದಿಗೆ ಸರ್ಕಾರದ ವತಿಯಿಂದ “ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮಾರಾಟ “ಖಾದಿ ಉತ್ಸವ-2025” ಮೇಳವನ್ನು ಆ.24 ರಿಂದ ಸೆ.2ರವರೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ನಗರಸಭೆ ಎದುರುಗಡೆಯಲ್ಲಿರುವ ಶಾದಿ ಮಹಲ್‌ನಲ್ಲಿ ಏರ್ಪಡಿಸಲಾಗಿತ್ತು.

ಈ ವಸ್ತು ಪ್ರದರ್ಶನದಲ್ಲಿ ಒಟ್ಟು 52 ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು. ಅದರಲ್ಲಿ 11 ಖಾದಿ ಸಂಘ-ಸಂಸ್ಥೆಗಳು ಮತ್ತು 6 ಸಿಲ್ಕ್ ಸಂಘ-ಸಂಸ್ಥೆಗಳು ಹಾಗೂ 35 ಗ್ರಾಮೋದ್ಯೋಗ ಉತ್ಪನ್ನಗಳ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು. ದೇಶದ ವಿವಿಧ ರಾಜ್ಯಗಳಿಂದ ಮತ್ತು ಕರ್ನಾಟಕದಿಂದ ಪಿಎಂಇಜಿಪಿ, ಸಿಎಂಇಜಿಪಿ ಯೋಜನೆಯಡಿ ಸಾಲ ಪಡೆದ ಫಲಾನುಭವಿಗಳು ಖಾದಿ ಆಯೋಗದಿಂದ ಮನ್ನಣೆ ಪಡೆದ, ಸಹಾಯಧನ ಪಡೆದ ಖಾದಿ ಸಂಘ-ಸಂಸ್ಥೆಯವರು ಭಾಗವಹಿಸಿದ್ದರು.

ಈ ಖಾದಿ ಮಾರಾಟ ಮೇಳದಲ್ಲಿ 10 ದಿನಗಳಿಗೆ 66.88 ರೂ. ಲಕ್ಷಗಳ ಖಾದಿ ಮತ್ತು ಸಿಲ್ಕ್ ಮಾರಾಟವಾಗಿದೆ. ಗ್ರಾಮೋದ್ಯೋಗದ ಉತ್ಪನ್ನಗಳಾದ ರೆಡಿಮೆಡ್‌ ಗಾರ್ಮೆಂಟ್ಸ್, ಆಯುವೇರ್ದಿಕ್‌ ವಸ್ತುಗಳು, ಚನ್ನಪಟ್ಟಣದ ಗೊಂಬೆ, ನೈಸರ್ಗಿಕವಾದ ಚಾಪೆಗಳು ಮತ್ತು ಚಪ್ಪಲಿಗಳು ಸೇರಿದಂತೆ 83.74 ಲಕ್ಷ ರೂ. ಗಳ ಗ್ರಾಮೋದ್ಯೋಗ ವಸ್ತುಗಳ ಮಾರಾಟ ಒಳಗೊಂಡಂತೆ ಒಟ್ಟಾರೆ 1.50 ಕೋಟಿ ರೂ. ಮೌಲ್ಯದ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳು ಮಾರಾಟವಾಗಿರುತ್ತದೆ.

ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮಾರಾಟ ಮೇಳದಲ್ಲಿ 30,000 ಜನರು ಭೇಟಿ ನೀಡಿದ್ದು, ಕೊಪ್ಪಳ ಜಿಲ್ಲೆ ಹಾಗೂ ಸುತ್ತಾಲಿನ ಜಿಲ್ಲೆಗಳಿಂದ ಸಾರ್ವಜನಿಕರು ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಿದ್ದಾರೆ. 13 ವರ್ಷಗಳ ನಂತರ ಆಯೋಜಿಸಿದ ಈ ವಸ್ತು ಪ್ರದರ್ಶನವು ಯಶಸ್ವಿಯಾಗಿ ಮುಕ್ತಾಯಗೊಂಡಿರುತ್ತದೆ.

ಪ್ರಮಾಣ ಪತ್ರಗಳ ವಿತರಣೆ :

ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ ಪ್ರದರ್ಶಕರಿಗೆ ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೆಂಕಟೇಶ ನಾಗನೂರು, ಕೊಪ್ಪಳ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಕಾರ್ಪಣಿ ಮಾರುತಿ ಹಾಗೂ ಕೊಪ್ಪಳ ಎಸ್.ಬಿ.ಐ. ಆರ್ಸೆಟಿ ನಿರ್ದೇಶಕ ರಾಯೇಶ್ವರ ಪೈ ಅವರು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ ಕೊಪ್ಪಳ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಕೆ.ವಿರೇಶ್, ನಿವೃತ್ತ ಜಿಲ್ಲಾ ಖಾದಿ ಗ್ರಾಮೊದ್ಯೋಗ ಅಧಿಕಾರಿ ಎನ್.ಜಿ ಹುನಗುಂದ ಸೇರಿದಂತೆ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ ಕೊಪ್ಪಳ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X