Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಗೌರಿ-ಗಣೇಶ ಹಬ್ಬ;...

ಕೊಪ್ಪಳ | ಗೌರಿ-ಗಣೇಶ ಹಬ್ಬ; ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್: ಎಸ್‌ಪಿ ಸಾಹಿಲ್ ಬಾಗ್ಲಾ

15 ರೌಡಿಗಳ ಗಡಿಪಾರು, 8,282 ಸಿಸಿಟಿವಿ, 3 ಡ್ರೋನ್ ಕಣ್ಗಾವಲು

ವಾರ್ತಾಭಾರತಿವಾರ್ತಾಭಾರತಿ14 Sept 2026 6:40 PM IST
share
ಕೊಪ್ಪಳ | ಗೌರಿ-ಗಣೇಶ ಹಬ್ಬ; ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್: ಎಸ್‌ಪಿ ಸಾಹಿಲ್ ಬಾಗ್ಲಾ

ಕೊಪ್ಪಳ, ಸೆ.14: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ಆಚರಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.

ಸೋಮವಾರ ಎಸ್ಪಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ 4 ಡಿವೈಎಸ್‌ಪಿ, 14 ಪಿಐ/ಸಿಪಿಐ, 27 ಪಿಎಸ್‌ಐ, 59 ಎಎಸ್‌ಐ ಹಾಗೂ 395 ಹೆಡ್ ಕಾನ್ಸ್‌ಟೇಬಲ್ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ 3 ಕೆಎಸ್‌ಆರ್‌ಪಿ ತುಕಡಿಗಳು, 10 ಡಿಎಆರ್ ತುಕಡಿಗಳು ಹಾಗೂ 500 ಗೃಹರಕ್ಷಕ ಸಿಬ್ಬಂದಿಯನ್ನೂ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.

ಮುಂಜಾಗ್ರತಾ ಕ್ರಮವಾಗಿ 15 ರೌಡಿ ಹಾಗೂ ರೂಢಿಗತ ಅಪರಾಧಿಗಳನ್ನು ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇರುವ ರೌಡಿಶೀಟರ್‌ಗಳು, ಕೋಮುಗೂಂಡಾಗಳು ಸೇರಿದಂತೆ ಒಟ್ಟು 1,177 ಮಂದಿಯಿಂದ ತಾಲೂಕು ದಂಡಾಧಿಕಾರಿಗಳ ಸಮಕ್ಷಮ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ 8,282 ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತಿದ್ದು, 735 ಸೂಕ್ಷ್ಮ ಪ್ರದೇಶಗಳನ್ನು ಕಮಾಂಡ್ ಸೆಂಟರ್‌ನಿಂದ 24 ಗಂಟೆಗಳ ಕಾಲ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹೆಚ್ಚುವರಿ ಗಸ್ತಿಗಾಗಿ 20 ವಾಹನಗಳನ್ನು ನಿಯೋಜಿಸಲಾಗಿದ್ದು, ಪ್ರಮುಖ ಗಣೇಶ ವಿಸರ್ಜನಾ ದಿನಗಳಲ್ಲಿ 3 ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇರಲಿದೆ.

ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಧಿಕಾರಿಗಳ ನೇತೃತ್ವದಲ್ಲಿ ಹಾಗೂ ಬೀಟ್ ಮಟ್ಟದಲ್ಲಿ ಒಟ್ಟು 138 ಶಾಂತಿ ಸಭೆಗಳನ್ನು ನಡೆಸಲಾಗಿದೆ. ಗಣೇಶ ವಿಸರ್ಜನೆಯ ಪ್ರಮುಖ ದಿನಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಕೊಪ್ಪಳ, ಗಂಗಾವತಿ ಹಾಗೂ ಕನಕಗಿರಿ ಪಟ್ಟಣಗಳ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ (ಫ್ಲ್ಯಾಗ್ ಮಾರ್ಚ್) ನಡೆಸಲಾಗಿದೆ.

ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಯಾವುದೇ ತುರ್ತು ಪರಿಸ್ಥಿತಿ ಅಥವಾ ಪ್ರಮುಖ ಮಾಹಿತಿಗಾಗಿ ಸಾರ್ವಜನಿಕರು 112 ಸಹಾಯವಾಣಿಗೆ ಕರೆ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹೇಮಂತ್ ಕುಮಾರ್, ಪಿ.ಐ ಸುರೇಶ್ ಡಿ, ಪಿ.ಎಸ್.ಐ ರೇವಣ್ಣ ಗುರಿಕಾರ್ , ಸೇರಿದಂತೆ ಇತರೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags

policeKoppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X