ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎಸ್‌ಯುಎಮ್ ಆಗ್ರಹ

ಕೊಪ್ಪಳ: ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂಮೆಂಟ್ ಕೊಪ್ಪಳ ಘಟಕವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಯುಎಮ್, ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಪ್ರೀತಿ ವಿಚಾರಕ್ಕೆ ಹತ್ಯೆ ಮಾಡಲಾಗಿದ್ದು, ತಪ್ಪಿತಸ್ಥರು ಬಂಧಿತರಾಗಿದ್ದಾರೆ ಎಂಬುದು ಸಂತೋಷದ ವಿಷಯವಾಗಿದ್ದರೂ ಈ ಘಟನೆಯು ಶಾಂತಿ, ಕಾನೂನು ಹಾಗೂ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಪರಿಣಾಮ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಆರೋಪಿಗಳಲ್ಲಿ ಗಾಂಜಾ ಸೇವನೆ ಬಗ್ಗೆ ಶಂಕೆ ವ್ಯಕ್ತವಾಗಿದೆ. ನಗರದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಪ್ರಕರಣದಲ್ಲಿ ಯಾವುದೇ ಸಮುದಾಯವನ್ನು ಉದ್ದೇಶಿಸಿ ತಪ್ಪು ಪ್ರಚಾರ ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಈ ವೇಳೆ ಸೋಲಿಡಾರಿಟಿ ಯೂತ್ ಮೂಮೆಂಟ್‌ನ ಜಿಲ್ಲಾಧ್ಯಕ್ಷ ಎಜಾಜ್ ಅಹ್ಮದ್ ಶರೀಫ್, ಕಾರ್ಯದರ್ಶಿ ಮುಹಮ್ಮದ್ ಯೂಸೂಫ್, ಸದಸ್ಯರಾದ ಮಹ್ಮದ್ ಗೌಸ್ ಪಟೇಲ್, ರಹಮತ್ ಹುಸೇನ್ ಹಾಗೂ ಇತರರು ಇದ್ದರು.





