ಕೊಪ್ಪಳ | ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗಲೇ ಹೃದಯಾಘಾತ: ಶಿಕ್ಷಕ ಮೃತ್ಯು

ಹನುಮಸಾಗರ (ಕೊಪ್ಪಳ ಜಿಲ್ಲೆ), 12: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಲ್ಲಿ ಮೃತಪಟ್ಟ ಘಟನೆೆ ಬುಧವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ಹನುಮಸಾಗರದ ಕೆಪಿಎಸ್‌ಸಿ ಶಾಲೆಯಲ್ಲಿ ನಡೆದಿದೆ.
ಹನುಮಸಾರದ ನಿವಾಸಿ ಮೆಹಬೂಬ್ ಸಾಬ್ ಕಸಾಬ್ (59) ಮೃತ ಶಿಕ್ಷಕ ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ ಸುಮಾರು 12:20 ಗಂಟೆಗೆ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದರಿಂದ ಗಾಬರಿಯಾದ ವಿದ್ಯಾರ್ಥಿಗಳು ಶಾಲೆಯ ಮುಖ್ಯೋಪಾಧ್ಯಯರಿಗೆ ತಿಳಿಸಿದ್ದಾರೆ. ತರಗತಿಗೆ ಬಂದ ಸಹ ಶಿಕ್ಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವ ದಾರಿ ಮದ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೆಹಬೂಬ್ ಸಾಬ್ ಅವರು ಮುಂದಿನ ವರ್ಷ ಮೇ.31 ರಂದು ಸೇವೆಯಿಂದ ನಿವೃತ್ತಿಯಾಗಲಿದ್ದರು.
Next Story





