Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಸಮೂಹ ಸಾರಿಗೆ, ವಿದ್ಯುತ್...

ಕೊಪ್ಪಳ | ಸಮೂಹ ಸಾರಿಗೆ, ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡಿ: ಪ್ರಭುಸ್ವಾಮಿ ಹಿರೇಮಠ

ವಾರ್ತಾಭಾರತಿವಾರ್ತಾಭಾರತಿ5 Nov 2025 6:39 PM IST
share
ಕೊಪ್ಪಳ | ಸಮೂಹ ಸಾರಿಗೆ, ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡಿ: ಪ್ರಭುಸ್ವಾಮಿ ಹಿರೇಮಠ
ʼವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆʼ ಕಾರ್ಯಕ್ರಮ

ಕೊಪ್ಪಳ : ಹೆಚ್ಚಿನ ಸಂಖ್ಯೆಯ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ತಡೆಗಟ್ಟಲು ಸಮೂಹ ಸಾರಿಗೆ ಮತ್ತು ವಿದ್ಯುತ್ ಚಾಲಿತ ವಾಹನಗಳ ಬಳಕೆ ಮಾಡುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಹೇಳಿದರು.

ಅವರು ಮಂಗಳವಾರ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ʼವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆʼ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಹನಗಳ ಸಂಚಾರ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ವಾಹನಗಳಿಂದ ಹೊರಸೂಸುವ ಅನಿಲವು ಶುದ್ಧಗಾಳಿಯನ್ನು ವಿಷಕಾರಿಯನ್ನಾಗಿ ಮಾಡುತ್ತಿದೆ. ವಾಹನಗಳಿಂದ ಹೊರಸೂಸುವ ವಿಷಕಾರಿ ಅನಿಲಗಳಿಂದ ಮಾನವನ ಆರೋಗ್ಯದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮಗಳು ಉಂಟಾಗುತ್ತಿವೆ. ವಾಹನ ಮಾಲಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಮೀಪದ ಪ್ರದೇಶಗಳಲ್ಲಿ ಹೋಗಿ ಬರಲು ಬೈಸಿಕಲ್ ಬಳಸಬೇಕು. ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಿ ಬಳಕೆ ಮಾಡಬಹುದು ಎಂದರು.

ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಚನ್ನಬಸವ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ವಾಯು ಮಾಲಿನ್ಯದಿಂದ ಮಾನವನ ಆರೋಗ್ಯದ ಮೇಲೆ ಹಾಗೂ ಪರಿಸರದ ಮೇಲೆ ಆಗುವ ಹಾನಿಗಳ ಬಗ್ಗೆ ತಿಳಿಸಿ, ಅದನ್ನು ನಿಯಂತ್ರಿಸುವ ಕ್ರಮದ ಬಗ್ಗೆ ವಿವರಿಸಿದರು.

ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಜಿ.ಎಂ.ಸುರೇಶ ಅವರು, ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವ ಬಗ್ಗೆ ಹಾಗೂ ನಿಯಮಿತವಾಗಿ ವಾಹನದ ಮಾಲಿನ್ಯ ತಪಾಸಣೆ ಮಾಡಿಸುವ ಬಗ್ಗೆ ವಿವರಣೆ ನೀಡಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಎನ್.ಪ್ರಭಾಕರ್, ವಿನಾಯಕ್ ನಾಯಕ್, ಮೋಟಾರು ವಾಹನ ನಿರೀಕ್ಷಕ ವಿಜೇಂದ್ರ ಢವಳಗಿ, ಕಚೇರಿ ಅಧೀಕ್ಷಕ ಎನ್.ನಾಗೇಶಕುಮಾರ ಸೇರಿದಂತೆ ಇತರೆ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X