Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ವಲ್ಲಭಬಾಯಿ ಪಟೇಲರು ರಾಷ್ಟ್ರದ...

ಕೊಪ್ಪಳ | ವಲ್ಲಭಬಾಯಿ ಪಟೇಲರು ರಾಷ್ಟ್ರದ ಏಕತೆಗಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು : ಬಿ.ವೀರಪ್ಪ

ವಾರ್ತಾಭಾರತಿವಾರ್ತಾಭಾರತಿ31 Oct 2025 7:55 PM IST
share
ಕೊಪ್ಪಳ | ವಲ್ಲಭಬಾಯಿ ಪಟೇಲರು ರಾಷ್ಟ್ರದ ಏಕತೆಗಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು : ಬಿ.ವೀರಪ್ಪ

ಕೊಪ್ಪಳ : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ತಮ್ಮ ‌ಜೀವನದುದ್ದಕ್ಕೂ ರಾಷ್ಟ್ರದ ಏಕತೆಗಾಗಿ ಶ್ರಮಿಸಿದ್ದರು ಎಂದು ಉಪಲೋಕಾಯುಕ್ತರಾದ ಬಿ.ವೀರಪ್ಪ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ‌ಜಿಲ್ಲಾ‌ ಪೊಲೀಸ್ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಐಕ್ಯತೆಗಾಗಿ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಇತರೆ ಹಲವಾರು ನಾಯಕರು ಶ್ರಮ ಪಟ್ಟಿದ್ದಾರೆ. ರಾಷ್ಟ್ರೀಯ ಐಕ್ಯತೆ ಅವರ ರಕ್ತದಲ್ಲಿತ್ತು. ಐಕ್ಯತೆ ಬೆಳೆಸಬೇಕಾದರೆ ನಮ್ಮಲ್ಲಿ ನಿಸ್ವಾರ್ಥ ದೇಶಭಕ್ತಿ ಇರಬೇಕು. ಭಾರತ ಹಲವಾರು ಧರ್ಮಗಳ ಸಮ್ಮಿಲನವಾಗಿದೆ. ಐಕ್ಯತೆಗಾಗಿ ನಾವು ದಿನದ 24 ತಾಸು ಶ್ರಮಿಸಬೇಕಿದೆ ಎಂದರು.

ಐಕ್ಯತೆ ಜೊತೆಗೆ ಈ ದೇಶದ ದೊಡ್ಡ ಪಿಡುಗು ಭ್ರಷ್ಟಾಚಾರವಾಗಿದೆ. ಇದರ ನಿರ್ಮೂಲನೆಗೆ ನಾವೆಲ್ಲರೂ ಶ್ರಮಿಸಬೇಕಿದೆ. ನಮ್ಮ ಮಕ್ಕಳಿಗೆ ದೇಶಭಕ್ತಿ. ದೇಶಾಭಿಮಾನ ಹಾಗೂ ಐಕ್ಯತೆಯಿಂದ ಬಾಳುವಂತೆ ಅವರಿಗೆ ತಿಳಿ ಹೇಳಬೇಕೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ‌ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್‌ ‌ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ‌‌ ಪೊಲೀಸ್ ‌ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಕರ್ನಾಟಕ ಲೋಕಾಯುಕ್ತದ ವಿಚಾರಣೆ ಅಪರ ನಿಬಂಧಕರಾದ ಡಾ.ಕಸನಪ್ಪ ನಾಯ್ಕ, ರಮಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಾಗುಬ್ಬಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತಕುಮಾರ್, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ. ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ. ಕ್ರೀಡಾ ಇಲಾಖೆಯ ‌ಸಹಾಯಕ ನಿರ್ದೆಶಕರಾದ ವಿಠಲ ಜಾಬಗೌಡರ, ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಜಿಲ್ಲಾ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ‌ ನಂತರ ಉಪಲೋಕಾಯುಕ್ತರು ಜಿಲ್ಲಾ ‌ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿ‌ ವಸತಿ ನಿಲಯದ‌ಲ್ಲಿ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ವಸತಿ ನಿಲಯದಲ್ಲಿ ‌ಮಕ್ಕಳಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X