Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಸ್ವಾತಂತ್ರ್ಯ ಚಳುವಳಿಯ ಬೀಜ...

ಕೊಪ್ಪಳ | ಸ್ವಾತಂತ್ರ್ಯ ಚಳುವಳಿಯ ಬೀಜ ಬಿತ್ತನೆಗೆ ವಂದೇ ಮಾತರಂ ಸಹಕಾರಿ: ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ7 Nov 2025 6:50 PM IST
share
ಕೊಪ್ಪಳ | ಸ್ವಾತಂತ್ರ್ಯ ಚಳುವಳಿಯ ಬೀಜ ಬಿತ್ತನೆಗೆ ವಂದೇ ಮಾತರಂ ಸಹಕಾರಿ: ಜಿಲ್ಲಾಧಿಕಾರಿ ಸುರೇಶ ಇಟ್ನಾಳ
ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮ

ಕೊಪ್ಪಳ : ಭಾರತ ಸ್ವಾತಂತ್ರ್ಯ ಪೂರ್ವದಲ್ಲಿ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನದಿಂದಾಗಿ ಜನರಲ್ಲಿ ದೇಶದ ಏಕತೆಯ ಭಾವನೆ ಮೂಡಿ ಸ್ವಾತಂತ್ರ್ಯಚಳುವಳಿಯ ಬೀಜ ಬಿತ್ತನೆಗೆ ಈ ಗೀತೆ ಸಹಕಾರಿಯಾಯಿತು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ವಂದೇಮಾತರಂ ಗೀತೆಗೆ ನವೆಂಬರ್ 7ಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ "ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮ"ದಲ್ಲಿ ಭಾಗವಹಿಸಿ ಮಾತನಾಡಿದರು.

ಯಾವ ಸಂದರ್ಭದಲ್ಲಿ ಜನರಿಗೆ ದೇಶ ಭಕ್ತಿ ಪರಿಕಲ್ಪನೆ ಇರಲಿಲ್ಲ. ಆಗ ರಚನೆಯಾದ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನದಿಂದ ಜನರಲ್ಲಿ ದೇಶ ಪ್ರೇಮ, ಭಕ್ತಿ, ಭಾವನೆ ಹುಟ್ಟಿಕೊಳ್ಳಲು ಅನುಕೂಲವಾಯಿತು. ವಂದೇ ಮಾತರಂ ಗೀತೆಯನ್ನು ಬಂಕಿಮ್ ಚಂದ್ರ ಚಟರ್ಜಿ ರವರು 1875 ನವೆಂಬರ್ 7ರ ಅಕ್ಷಯ ನವಮಿಯ ಶುಭ ಸಂದರ್ಭದಲ್ಲಿ ರಚಿಸಿದ್ದು, ವಂದೇ ಮಾತರಂ ಗೀತೆಯು ಮೊದಲು ಸಾಹಿತ್ಯಿಕ ಪತ್ರಿಕೆ ಬಂಗದರ್ಶನದಲ್ಲಿ ಅವರ ಕಾದಂಬರಿ ಆನಂದಮಠದ ಭಾಗವಾಗಿ ಧಾರಾವಾಹಿಯಾಗಿ ಮತ್ತು 1887ರಲ್ಲಿ ಸ್ವತಂತ್ರ ಪುಸ್ತಕವಾಗಿ ಮುದ್ರಣಗೊಂಡಿತು. ಈ ಅವಧಿಯಲ್ಲಿ ಭಾರತವು ಪ್ರಮುಖ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಬದಲಾವಣೆಗಳಿಗೆ ಒಳಗಾಗುತ್ತಿತ್ತು. ವಸಾಹತುಶಾಹಿ ಆಳ್ವಿಕೆಗೆ ರಾಷ್ಟ್ರೀಯ ಗುರುತಿನ ಪ್ರಜ್ಞೆ ಮತ್ತು ಪ್ರತಿರೋಧ ಬೆಳೆಯುತ್ತಿತ್ತು. ಈ ಸಂದರ್ಭದಲ್ಲಿ ಶಕ್ತಿ ಸಮೃದ್ಧಿ ಮತ್ತು ದೈವತ್ವದ ಸಾಕಾರ ರೂಪವಾಗಿ ಮಾತೃಭೂಮಿಯನ್ನು ಸ್ವಾಗತಿಸುವ ಈ ಹಾಡು ಭಾರತದ ಏಕತೆ, ಸಮಗ್ರತೆ ಮತ್ತು ಸ್ವಾಭಿಮಾನದ ಜಾಗೃತಿ ಮನೊಭಾವಕ್ಕೆ ಕಾವ್ಯಾತ್ಮಕ ಅಭಿವ್ಯಕ್ತಿಯ ಪ್ರೇರಣೆಯನ್ನು ನೀಡಿತು ಎಂದರು.

ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡ್ರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಶಕುಂತಲಾ ಬಿನ್ನಾಳ ಹಾಗೂ ತಂಡದವರು ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X