ಕೊಪ್ಪಳ | ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ವೆಲ್ಫೇರ್ ಪಾರ್ಟಿ ಮಹಿಳಾ ಘಟಕದಿಂದ ಖಂಡನೆ
ಕೊಪ್ಪಳ: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿ ಹೊರಹಾಕಿದ್ದಾರೆ. ಇದು ಮಹಿಳೆಯರಿಗೆ ಆದ ಅಪಮಾನ ಮತ್ತು ಇದು ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಹಿಳಾ ಘಟಕ ರಾಜ್ಯ ಆಧ್ಯಕ್ಷೆ ಸಬಿಹಾ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂ ಗೌರವ ಕೊಡದ ರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು. ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆ. ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Next Story