ಕುಕನೂರು | ಗ್ರಾಮ-1 ಯೋಜನೆಗೆ ಅರ್ಜಿ ಆಹ್ವಾನ

ಕುಕನೂರು : ತಾಲೂಕಿನ ಮಂಗಳೂರು, ಭಾನಾಪುರ ಹಾಗೂ ಕುದರಿಮೋತಿ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿ ಗ್ರೇಡ್-2 ಇಂದ ಗ್ರೇಡ್-1ಕ್ಕೆ ನವೀಕರಿಸಲಾದ ಹಾಗೂ ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಹೊಸ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ.
ಆಯಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಏಪ್ರಿಲ್ 15ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




